ಗೋಣಿಕೊಪ್ಪಲು, ಮಾ. ೩: ಐದು ವರ್ಷದ ಕೆಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಯನ್ನು ಹಾಕುವ ಮೂಲಕ ಪೊನ್ನಂಪೇಟೆ ತಾಲ್ಲೂಕು ತಹಶಿಲ್ದಾರ್ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.
ಕೊಡಗು ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗೋಣಿಕೊಪ್ಪಲು ವಿನ ಆಸ್ಪತ್ರೆ ಆವರಣದಲ್ಲಿ ಆಯೋಜನೆ ಗೊಂಡಿದ್ದ ಕಾರ್ಯಕ್ರಮಕ್ಕೆ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಪ್ರಶಾಂತ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ತಹಶೀ ಲ್ದಾರ್ ಪ್ರಶಾಂತ್, ದೇಶದಾದ್ಯಂತ ಯಶ ಸ್ವಿಯಾಗಿ ಕಾರ್ಯಕ್ರಮ ನಡೆಯುತ್ತಿದೆ. ನಮ್ಮ ಭಾರತ ದೇಶ ಸಂಪೂರ್ಣವಾಗಿ ಪೋಲಿಯೋ ಮುಕ್ತವಾಗಲು ಈ ಕಾರ್ಯ ಕ್ರಮ ಅತ್ಯಂತ ಮಹತ್ವದ್ದಾಗಿದೆ ಎಂದರು.
ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಹಿರಿಯ ವೈದ್ಯರಾದ ಡಾ.ಚಂದ್ರಶೇಖರ್, ತಾ. ೩ ರಿಂದ ೬ ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಮಕ್ಕಳ ಅರೋಗ್ಯಕ್ಕೆ ಪೂರಕವಾದ ಪಲ್ಸ್ ಪೋಲಿಯೋ ಹನಿ ನೀಡಲಾಗುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಶೇ.೧೦೦ರ ಗುರಿಮುಟ್ಟಬೇಕಾಗಿದೆ ಎಂದು ವೈದ್ಯಾಧಿಕಾರಿ ಡಾ.ಯತಿರಾಜ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ತಾಲೂಕು ನಿರೀಕ್ಷಣಾಧಿಕಾರಿ ಶಶಿಕಾಂತ್ ಎಂ.ಪಿ, ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳಾದ ಕಾವೇರಮ್ಮ, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯ ಕರ್ತೆಯರು ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.