ಕೂಡಿಗೆ, ಮಾ. ೩: ತೊರೆನೂರು ದೇವೇಗೌಡನಕೊಪ್ಪಲು ಗ್ರಾಮದಲ್ಲಿರುವ ಶ್ರೀ ಶನೇಶ್ವರ ಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ ಹಾಗೂ ಕುಶಾಲನಗರ ಕನ್ನಡಸಿರಿ ಸ್ನೇಹ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಮಹಾ ಶಿವರಾತ್ರಿ ಹಬ್ಬದ ವಿಶೇಷ ಪೂಜೆ, ಹಾಗೂ ಜಾನಪದ ಉತ್ಸಾಹ ಕಾರ್ಯಕ್ರಮವು ಶ್ರೀ ಶನೇಶ್ವರ ದೇವಾಲಯದ ಆವರಣದಲ್ಲಿ ತಾ ೮. ರಂದು ನಡೆಯಲಿದೆ.

ದೇವಾಲಯದಲ್ಲಿ ಬೆಳಿಗ್ಗೆನಿಂದಲೇ ಶ್ರೀ ಸ್ವಾಮಿಗೆ ವಿಶೇಷ ಪೂಜೆ, ಸಾಮೂಹಿಕ ಮಹಾ ಮೃತ್ಯುಂಜಯ ಹೋಮ, ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು, ಸಂಜೆ ೭. ಗಂಟೆಗೆ ವಿಶ್ವ ಮಹಿಳಾ ದಿನಾಚರಣೆ, ಹಾಗೂ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ದೇವಾಲಯ ಸಮಿತಿಯ ಕಾರ್ಯದರ್ಶಿ ಕೆ.ಎಸ್. ಕೃಷ್ಣಗೌಡ ತಿಳಿಸಿದ್ದಾರೆ.