ಸಿದ್ದಾಪುರ, ಮಾ. ೩: ಬಾಡಗ ಬಾಣಂಗಾಲ ಗ್ರಾಮದ ಶ್ರೀ ಸಿದ್ದಪ್ಪಾಜಿ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ತಾ.೮ ರಂದು ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ ೮ ಗಂಟೆಯಿAದ ಗಣಪತಿ ಹೋಮ, ನಗರಿ ತಮಟೆ ನಾಗಸ್ವರ ಡೊಳ್ಳು ನಗರಿ ಕುಣಿತ ಶ್ರೀ ಸಿದ್ದಪ್ಪಾಜಿ ದೇವರ ಕಂಡಯ ಮೆರವಣಿಗೆ ಹಾಗೂ ದೊಡ್ಡಮ್ಮ ತಾಯಿಯ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ರಾತ್ರಿ ೮ ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ, ದೇವಾಲಯದ ಪ್ರಮುಖರಾದ ಬಾಲ ಸ್ವಾಮಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ರಾತ್ರಿ ೯ಕ್ಕೆ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ದೇವಾಲಯದ ಪ್ರಮುಖ ಗಣೇಶ್ ತಿಳಿಸಿದ್ದಾರೆ.