ಮಡಿಕೇರಿ, ಮಾ. ೫: ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾ ವಿದ್ಯಾಲಯಗಳಲ್ಲಿ ೨೦೨೩-೨೪ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷಾ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಗಿದಿದ್ದು ಮೊದಲ ಹಂತದಲ್ಲಿ ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ಫಲಿತಾಂಶವನ್ನು ತಾ.೫ ರಂದು ಪ್ರಕಟಿಸಲಾಗಿದೆ. ಎರಡನೇ ಹಂತದಲ್ಲಿ ಬಿಎ ಪದವಿಯ ಫಲಿತಾಂಶವನ್ನು ಸಹ ಅತೀ ಶೀಘ್ರವಾಗಿ ಪ್ರಕಟಿಸಲಾಗುತ್ತದೆ.
ಕೊಡಗು ವಿಶ್ವವಿದ್ಯಾಲಯದ ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಮಾರ್ಚ್ನಲ್ಲಿ ಪೂರ್ಣಗೊಂಡಿದೆ. ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಎಫ್ಎಂಕೆಎAಸಿ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಮೌಲ್ಯಮಾಪಕರು ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬAಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUಅಒS) ಮೂಲಕ ಯಶಸ್ವಿಯಾಗಿ ಪೂರ್ಣ ಗೊಳಿಸಲಾಗಿದ್ದು, ಸ್ನಾತಕ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿ ದ್ಯಾಲಯದ ವೆಬ್ಸೈಟ್ ಞuಞ.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ. ೨೦೨೩-೨೦೨೪ನೇ ಶೈಕ್ಷಣಿಕ ಸಾಲಿನ ಪ್ರಥಮ ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ಸೆಮಿಸ್ಟರ್ನ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದ ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಕೊಡಗು ವಿಶ್ವವಿದ್ಯಾಲಯವು ಭಾಜನವಾಗಿದೆ. ಇದೇ ಸಂದರ್ಭದಲ್ಲಿ ಸ್ನಾತಕ ಪದವಿ ಪರೀಕ್ಷಾ ಫಲಿತಾಂಶಗಳನ್ನು ಕುರಿತು ಮಾತನಾಡಿದ ಕೊಡಗು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಅಶೋಕ ಸಂ ಆಲೂರ ಅವರು, ಯುಜಿಸಿ ಮಾನ್ಯತೆ ಸಿಕ್ಕಿರುವುದರಿಂದ ಯುಜಿಸಿ ಅಡಿಯಲ್ಲಿ ಬರುವಂತಹ ವಿವಿಧ ಪದವಿಗಳನ್ನು ನೀಡಲು ಕೊಡಗು ವಿಶ್ವವಿದ್ಯಾಲಯವು ಅಧಿಕೃತ ಮಾನ್ಯತೆ ಪಡೆದುಕೊಂಡಿದೆ. ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳಲ್ಲಿ ೧೦೨೫ ವಿದ್ಯಾರ್ಥಿಗಳು ಮತ್ತು ೯೯೯ ಮಹಿಳಾ ವಿದ್ಯಾರ್ಥಿನಿಯರು ಸೇರಿ ಒಟ್ಟು ೨೦೨೪ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆದಿದ್ದಾರೆ ಎಂದರು.
ಕೊಡಗು ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಡಾ. ಸೀನಪ್ಪ ಅವರು ಮಾತನಾಡಿ, ಪರೀಕ್ಷೆಗಳು ಮುಗಿದ ೨೦ ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನವಿದ್ದು ಅದರಂತೆಯೇ ಕೊಡಗು ವಿಶ್ವವಿದ್ಯಾಲಯವು ಪರೀಕ್ಷೆಗಳು ನಡೆದ ಕೇವಲ ಒಂದು ದಿನದೊಳಗೆ ಮೊದಲ ಹಂತದ ಫಲಿತಾಂಶವನ್ನು ಪ್ರಕಟಿಸುವಲ್ಲಿ ಸಫಲವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿ ಪರೀಕ್ಷೆಗಳ ಸಂಯೋಜಕ ಪ್ರೊ. ರವಿಶಂಕರ್, ಪರೀಕ್ಷಾ ಮೇಲ್ವಿಚಾರಕÀ ಪ್ರೊ. ರಾಘವ್ ಹಾಗೂ ಉಪ ಮೇಲ್ವಿಚಾರಕಿ ಡಾ. ಶೈಲಶ್ರೀ ಉಪಸ್ಥಿತರಿದ್ದರು.