ಕೋವರ್ ಕೊಲ್ಲಿ ಇಂದ್ರೇಶ್

ಬೆAಗಳೂರು ಮಾ. ೫: ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಬAಧಪಟ್ಟAತೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದುಕೊಂಡೇ ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಮಂಗಳವಾರ ಬೆಳಿಗ್ಗೆಯಿಂದಲೇ ದೇಶಾದ್ಯಂತ ಎನ್‌ಐಎ ದಾಳಿ ನಡೆಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಣ್ಮೂರು ಗ್ರಾಮದ ಕುಲಾಯಿತೋಡು ಎಂಬಲ್ಲಿ ಕೂಡ ಧಾಳಿ ನಡೆಸಿ ಕೇರಳದ ಇಡುಕ್ಕಿ ಮೂಲದ ಬಿಜು ಅಬ್ರಹಾಂ ಎಂಬವನ ವಿಚಾರಣೆ ನಡೆಸಲಾಗಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಅಬ್ರಹಾಂ, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತಿದ್ದು ನಾಲ್ಕು ದಿನದ ಹಿಂದಷ್ಟೇ ಎಡಮಂಗಲದಿAದ ಕುಲಾಯಿತೋಡು ಎಂಬಲ್ಲಿಗೆ ಶಿಫ್ಟ್ ಆಗಿದ್ದನು. ಸದ್ಯ ದಾಳಿ ನಡೆಸಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಏಳು ರಾಜ್ಯಗಳ ೧೭ ಸ್ಥಳಗಳಲ್ಲಿ ಎನ್‌ಐಎ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ೨೦೧೦ ಸೋಮವಾರಪೇಟೆ ತಾಲೂಕಿನ ಹೊಸ ತೋಟದಲ್ಲಿ ಶುಂಠಿ ಕೃಷಿಯ ನೆಪದಲ್ಲಿ ಆಶ್ರಯ ಪಡೆದುಕೊಂಡು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಂಬ್ ಸ್ಪೋಟ ನಡೆಸಿದ್ದ ಪಾಕಿಸ್ತಾನ ಮೂಲದ ಲಷ್ಕರ್ ಏ ತೊಯ್ಬಾ ಭಯೋತ್ಪಾದಕ ಸಂಘಟನೆಯ ದಕ್ಷಿಣ ಭಾರತದ ಕಮಾಂಡರ್ ಎಂದು ಗುರುತಿಸಲಾಗಿರುವ ಕೇರಳ ಮೂಲದ ತಡಿಯಂಟವಿಡೆ ನಸೀರ್ ಎಂಬಾತ ಬೆಂಗಳೂರಿನ ಕಾರಾಗೃಹದಲ್ಲಿ ಇದ್ದುಕೊಂಡು ಹಲವು ವಿಚಾರಣಾಧೀನ ಕೈದಿಗಳ ಮತಾಂತರಕ್ಕೆ ಯತ್ನಿಸಿದ್ದುದು ಬೆಳಕಿಗೆ ಬಂದಿತ್ತು. ಇಂದು ನಸೀರ್ ಹಾಗೂ ಇತರ ಶಂಕಿತ ಭಯೋತ್ಪಾದಕರ ಸಂಪರ್ಕದಲ್ಲಿರುವವರ ಮೇಲೆ ಧಾಳಿ ನಡೆಸಲಾಗಿದೆ ಎಂದು ಎನ್‌ಐಏ ಮೂಲಗಳು ತಿಳಿಸಿವೆ.

ಕಳೆದ ವರ್ಷ ಜುಲೈ ೧೮ ರಂದು ಸಿಸಿಬಿ ಅಧಿಕಾರಿಗಳು ಆರ್‌ಟಿ ನಗರದ ಸುಲ್ತಾನ್ ಪಾಳ್ಯದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿ ಐವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದರು. ಸಿಸಿಬಿ ಪೊಲೀಸರ ಪ್ರಕಾರ ಬಂಧಿತ ಆರೋಪಿಗಳು ನಗರದಲ್ಲಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದರು. ಬಂಧಿತ ಆರೋಪಿಗಳಲ್ಲಿ ಒಬ್ಬನ ಮನೆಯಲ್ಲಿ ನಾಲ್ಕು ಜೀವಂತ ಗ್ರೆನೇಡ್‌ಗಳು ಪತ್ತೆಯಾಗಿದ್ದವು. ಹಾಗೆ ೭ ನಾಡ ಬಂದೂಕುಗಳು ಮತ್ತು ೪೫ ಸುತ್ತು ಜೀವಂತ ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಆರೋಪಿ ಆಗಿರುವ ಭಯೋತ್ಪಾದಕ ನಸೀರ್, ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದುಕೊಂಡೇ ಹಲವರನ್ನು ತೀವ್ರಗಾಮಿಗಳನ್ನಾಗಿ ಮಾಡಿ, ದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಪ್ರಚೋದಿಸಿದ್ದಾನೆ ಎಂಬ ಆರೋಪವಿದೆ.

ಈ ವರ್ಷದ ಜನವರಿ ೧೨ ರಂದು ಎನ್‌ಐಎ ಈ ಪ್ರಕರಣದ ಸಂಬAಧ ೮ ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿತ್ತು. ಚಾರ್ಜ್ಶೀಟ್ ಮಾಡಿರುವ ಆರೋಪಿಗಳಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಟಿ ನಾಸೀರ್ ೨೦೧೩ ರಿಂದ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಉಳಿದ ಇಬ್ಬರು ಆರೋಪಿಗಳಾದ ಜುನೈದ್ ಅಹ್ಮದ್ ಅಲಿಯಾಸ್ ಜೆಡಿ ಮತ್ತು ಸಲ್ಮಾನ್ ಖಾನ್ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.

ಎನ್‌ಐಎ ಅಧಿಕಾರಿಗಳು ಮಾರ್ಚ್ ೪ರ ರಾತ್ರಿ ೮ ಗಂಟೆಯಿAದ ಬೆಳಗ್ಗಿನ ಜಾವ ೬ ಗಂಟೆವರೆಗೂ ಪರಪ್ಪನ ಅಗ್ರಹಾರದ ಜೈಲಿನಲ್ಲಿ ಪರಿಶೀಲನೆ ನಡೆಸಿ ನಸೀರ್ ಸೇರಿದಂತೆ ಅನೇಕರ ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ನಂತರ ಧಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಮುಂದೆ ನಡೆಯಬಹುದಾದ ಸಂಭವನೀಯ ಭಯೋತ್ಪಾದನಾ ಧಾಳಿಯನ್ನು ತಡೆಯುವುದೇ ಇಂದಿನ ದಾಳಿಯ ಉದ್ದೇಶ ಆಗಿದ್ದು ಈ ಕುರಿತು ಎನ್‌ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.