ಸಿದ್ದಾಪುರ, ಮಾ. ೬: ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ವೆಸಗಿದ ಆರೋಪದಡಿಯಲ್ಲಿ ಬಾಲಕಿಯ ಚಿಕ್ಕಪ್ಪನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಫಿ ತೋಟವೊಂದರ ಲೈನ್ ಮನೆಯಲ್ಲಿ ವಾಸ ಮಾಡಿಕೊಂಡು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬಾಲಕಿಯ ಚಿಕ್ಕಪ್ಪ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅವರ ಪೋಷಕರು ಸಿದ್ದಾಪುರ ಠಾಣೆಗೆ ದೂರು ನೀಡಿದ ಮೇರೆಗೆ ಬಾಲಕಿಯ ಚಿಕ್ಕಪ್ಪನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.