ಮಡಿಕೇರಿ, ಮಾ. ೬: ವೇತನ ಪಾವತಿಗೆ ಆಗ್ರಹಿಸಿ ಫೀ.ಮಾ. ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾ ಸಕರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನವೂ ಮುಂದುವರಿಯಿತು.

ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಆಗಿರುವ ಡಾ. ಮಾಧವ ಅವರು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ೬ನೇ ದಿನಕ್ಕೆ ಕಾಲಿರಿಸಿದ ಪ್ರತಿಭಟನೆಗೆ ಬೆಂಬಲ ಸೂಚಿಸಿ ಸ್ಥಳಕ್ಕೆ ಭೇಟಿ ನೀಡಿದರು. ಮಂಗಳೂರು ವಿಶ್ವವಿದ್ಯಾ ನಿಲಯದಲ್ಲಿ ಹೊಸದಾಗಿ ನೇಮಕ ಗೊಂಡ ಕುಲಪತಿಗಳಿಗೆ ಸಂಘದ ಪರವಾಗಿ ಮನವಿ ಸಲ್ಲಿಸಲಾಗುವುದು. ಆದಷ್ಟು ಬೇಗ ವೇತನ ಬಿಡುಗಡೆಗೆ ಒತ್ತಾಯ ಮಾಡಲಾಗುವುದು ಎಂದು ಭರವಸೆಯನ್ನಿತ್ತರು. ಇದೀಗ ನವೆಂಬರ್ ತಿಂಗಳ ವೇತನ ಪಾವತಿಯಾಗಿದೆ. ಎಲ್ಲಾ ತಿಂಗಳ ವೇತನ ಪಾವತಿ ಆಗುವವರೆಗೆ ಪ್ರತಿಭಟನೆ ಮುಂದುವರೆಸಲಾ ಗುವುದು. ಅಲ್ಲದೆ, ಕೊರೊನಾ ಅವಧಿಯ ಮೂರು ತಿಂಗಳ ವೇತನವನ್ನು ಹಂತ ಹಂತವಾಗಿ ಪಾವತಿ ಮಾಡುವ ಬಗ್ಗೆ ಲಿಖಿತವಾಗಿ ಭರವಸೆ ನೀಡಬೇಕೆಂದು ಉಪ ನ್ಯಾಸಕರು ವಿ.ವಿ.ಯನ್ನು ಒತ್ತಾಯಿಸಿದ್ದಾರೆ. ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಅತಿಥಿ ಉಪನ್ಯಾಸಕರು ತಿಳಿಸಿದರು.