ಮುಳ್ಳೂರು, ಮಾ. ೬: ಕೊಡಗು ಜಿಲ್ಲಾ ಆಯುಷ್ ಇಲಾಖೆ, ಸೋಮವಾರಪೇಟೆ ಆಯುಷ್ ಆಸ್ಪತ್ರೆ ಮತ್ತು ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಆಲೂರುಸಿದ್ದಾಪುರ ಸಾರ್ವಜನಿಕ ಸಮುದಾಯ ಭವನದಲ್ಲಿ ಆಯುಷ್ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಆರೋಗ್ಯ ಶಿಬಿರವನ್ನು ಆಲೂರುಸಿದ್ದಾಪುರ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಉದ್ಘಾಟಿಸಿದರು. ಸೋಮವಾರಪೇಟೆ ಆಯುಷ್ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶ್ವೇತ ಶಿಬಿರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ-ಸರಕಾರ ಮತ್ತು ಆಯುಷ್ ಇಲಾಖೆ ಪ್ರತಿಯೊಂದು ಗ್ರಾ.ಪಂ. ಕೇಂದ್ರ ವ್ಯಾಪ್ತಿಯಲ್ಲಿ ಆಯುಷ್ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳುತ್ತಿದ್ದು ಶಿಬಿರದಲ್ಲಿ ಆಯುಷ್ ಪದ್ಧತಿಯಂತೆ ರೋಗಿಗಳನ್ನು ಪರೀಕ್ಷಿಸಿ, ರೋಗಿಗಳಿಗೆ ಉಚಿತವಾಗಿ ಆಯುರ್ವೇದಿಕ್ ಔಷಧಿ ಮಾತ್ರೆಗಳನ್ನು ವಿತರಿಸಲಾಗುತ್ತಿದೆ ಎಂದರು.

ವೇದಿಕೆಯಲ್ಲಿ ಗ್ರಾ.ಪಂ. ಸದಸ್ಯೆ ದಮಯಂತಿ ಕರುಂಬಯ್ಯ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹರೀಶ್ ಮುಂತಾದವರು ಹಾಜರಿದ್ದರು. ಆರೋಗ್ಯ ಶಿಬಿರದಲ್ಲಿ ವಿವಿಧ ಕಾಯಿಲೆ, ಆರೋಗ್ಯ ಸಮಸ್ಯೆಗೆ ಸಂಬAಧಪಟ್ಟAತಹ ರೋಗಿಗಳಿಗೆ ಆಯುಷ್ ವೈದ್ಯರು ಚಿಕಿತ್ಸೆ ನೀಡಿ ರೋಗಿಗಳಿಗೆ ಸಲಹೆ ನೀಡಿದರು. ರೋಗಿಗಳಿಗೆ ಉಚಿತ ಔಷಧಿ ಮಾತ್ರೆಗಳನ್ನು ವಿತರಿಸಲಾಯಿತು. ಆರೋಗ್ಯ ಶಿಬಿರದಲ್ಲಿ ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ. ಸೌಪರ್ಣಿಕ, ಸಿಬ್ಬಂದಿ ರಾಜ್‌ಕುಮಾರ್, ಅಶೋಕ್, ರೂಪ, ಜ್ಯೋತಿ ಪಾಲ್ಗೊಂಡಿದ್ದರು.