ಕುಶಾಲನಗರ, ಮಾ. ೭: ಕುಶಾಲನಗರ ಮುಳ್ಳುಸೋಗೆ ಗ್ರಾಮ ವ್ಯಾಪ್ತಿಯ ಬಸವೇಶ್ವರ ಬಡಾವಣೆ ಬಯಲು ಬಸವೇಶ್ವರ ದೇವಸ್ಥಾನ ಸಮಿತಿಯ ೧೫ನೇ ವರ್ಷದ ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮ ಮತ್ತು ೨೦೨೩-೨೪ ರ ಸಾಲಿನ ಮಹಾಸಭೆ ತಾ. ೮ ರಂದು (ಇಂದು) ನಡೆಯಲಿದೆ.
ಬಸವೇಶ್ವರ ಬಡಾವಣೆಯ ದೇವಾಲಯದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಂದು ಬೆಳಿಗ್ಗೆ ಪೂಜಾ ಕಾರ್ಯಕ್ರಮ ನಡೆಯಲಿದೆ. ನಂತರ ಬಯಲು ಬಸವೇಶ್ವರ ಬಡಾವಣೆ ಹಿತರಕ್ಷಣಾ ಸಮಿತಿ ಅಧ್ಯಕ್ಷ ಟಿ.ಕೆ. ಸುದೀಪ್ ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಮತ್ತಿತರರು ಪಾಲ್ಗೊಳ್ಳುವರು.
ಇದೇ ಸಂದರ್ಭ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಕುಶಾಲನಗರ ಪುರಸಭೆಯ ಪೌರಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ಅಧ್ಯಕ್ಷರಾದ ಟಿ.ಕೆ. ಸುದೀಪ್ ಕುಮಾರ್ ತಿಳಿಸಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಬಡಾವಣೆಯ ಸಾರ್ವಜನಿಕ ಪುರುಷರಿಗೆ ಮಹಿಳೆಯರಿಗೆ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಏರ್ಪಡಿಸಲಾಗಿದೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.