ಇತರ ಉದ್ದೇಶಕ್ಕೆ ನೀರು ಬಳಕೆ ನಿಷೇಧ
ಮಡಿಕೇರಿ, ಮಾ.೬ : ಕೊಡಗು ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಸಾರ್ವಜನಿಕ ಹಿತಾಸಕ್ತಿಯಿಂದ ದಿ ಕರ್ನಾಟಕ ಇರಿಗೇಷನ್ ಆಕ್ಟ್, ೧೯೬೫ ರ ಕಲಂ ೪೬ ರಲ್ಲಿರುವಂತೆ ಮತ್ತು ದಂಡ ಪ್ರಕ್ರಿಯಾ ಸಂಹಿತೆ ೧೯೭೩ ರ ಕಲಂ ೧೩೩ ಆರ್/ಡಬ್ಲ್ಯು ಕಲಂ ೧೪೪ ರಲ್ಲಿ ದತ್ತವಾದ ಅಧಿಕಾರದಂತೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ನದಿ ಹಾಗೂ ನದಿ ಮೂಲಗಳಿಂದ ಅಕ್ರಮ/ ಅನಧಿಕೃತವಾಗಿ ಖಾಸಗಿ ಚಟುವಟಿಕೆಗಳಿಗೆ ೩ನಾಲ್ಕನೇ ಪುಟಕ್ಕೆ
(ಮೊದಲ ಪುಟದಿಂದ) ಪಂಪ್ಸೆಟ್ ಬಳಸಿ ಅಥವಾ ಕಾಲುವೆಗಳ ಮುಖಾಂತರ ನದಿ ನೀರನ್ನು ಇತರೆ ಉದ್ದೇಶಕ್ಕೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
ಈ ಆದೇಶದ ಉಲ್ಲಂಘನೆಯು ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ೨೦೦೫ ರ ಸೆಕ್ಷನ್ ೫೧ ಬಿ ರಡಿ ದಂಡನೀಯವಾಗಿದೆ ಎಂದು ಎಚ್ಚರಿಸಿದ್ದಾರೆ.