ಸಿದ್ದಾಪುರ, ಮಾ. ೭: ನಲ್ವತ್ತೇಕರೆ ಶ್ರೀ ವಿನಾಯಕ ಸೇವಾ ಸಮಿತಿ ಹಾಗೂ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಸುಳ್ಯ ಕೆವಿಜಿ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಇವರ ಸಹಯೋಗದೊಂದಿಗೆ ಸಾರ್ವಜನಿಕರಿಗೆ ತಾ. ೧೦ ರಂದು ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಕಾರ್ಯಾಗಾರ, ಉಚಿತ ಔಷಧಿ ವಿತರಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಶ್ರೀ ವಿನಾಯಕ ಸೇವಾ ಸಮಿತಿ ಕಾರ್ಯದರ್ಶಿ ಹೆಚ್.ಬಿ. ಅಕ್ಷಯ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನೆಲ್ಲಿಹುದಿಕೇರಿ ಶಾದಿ ಮಹಲ್ ಸಭಾಂಗಣದಲ್ಲಿ ಶಿಬಿರ ಆಯೋಜಿಸಿದ್ದು, ಶಿಬಿರದಲ್ಲಿ ಶಸ್ತç ಚಿಕಿತ್ಸಾ ವಿಭಾಗ, ಮಕ್ಕಳ ರೋಗ, ಇಎನ್‌ಟಿ, ನೇತ್ರ ಚಿಕಿತ್ಸೆ, ಚರ್ಮ ಮತ್ತು ಲೈಂಗಿಕ ರೋಗ, ಎಲುಬು ಮತ್ತು ಕೀಲು ರೋಗ, ದಂತ ಚಿಕಿತ್ಸೆ, ಶ್ವಾಸಕೋಶ ಹಾಗೂ ತುರ್ತು ಚಿಕಿತ್ಸೆ ವಿಭಾಗ ಸೇರಿದಂತೆ ನುರಿತ ೧೫ ವೈದ್ಯರುಗಳು ಆರೋಗ್ಯ ತಪಾಸಣೆ ಮಾಡಿ, ಔಷಧಿಗಳನ್ನು ಉಚಿತವಾಗಿ ನೀಡುವುದಾಗಿ ತಿಳಿಸಿದ್ದಾರೆ.

ಗೋಷ್ಠಿಯಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಟಿ.ಆರ್. ಮಣಿ, ಸದಸ್ಯರಾದ ಟಿ.ಕೆ. ಮನೋಜ್, ಕೆ.ವಿ. ಪ್ರಭಾಕರ್ ಮತ್ತು ಎ.ಬಿ. ಸತೀಶ್ ಇದ್ದರು.