ಮಡಿಕೇರಿ, ಮಾ. ೭: ವಿಧಾನಸೌಧದಲ್ಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೂ ನಾಸಿರ್ ಹುಸೇನ್ ಪ್ರಮಾಣ ವಚನ ಸ್ವೀಕರಿಸಬಾರದು ಎಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ರಾವ್ ಆಗ್ರಹಿಸಿದ್ದಾರೆ.
ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿದ್ದ ಭಯೋತ್ಪಾದಕ ನಿಗ್ರಹ ದಳವನ್ನು ಸರ್ಕಾರ ಬಂದ್ ಮಾಡಿದೆ. ಪರಿಣಾಮ ರಾಜ್ಯದಲ್ಲಿ ದೇಶ ವಿರೋಧಿ ಕೃತ್ಯಗಳು ನಡೆಯುತ್ತಿವೆ. ಸರ್ಕಾರದ ಪ್ರತಿನಿಧಿಗಳಾದವರು, ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಬೇಕಾದವರು ದೇಶದ್ರೋಹಿಗಳ ಪರ ಹೇಳಿಕೆ ನೀಡುತ್ತಾ; ಸುಳ್ಳು ಹೇಳುತ್ತಾ ಜನರ ದಾರಿ ತಪ್ಪಿಸುತ್ತಿರುವುದು ದುರಂತ ಎಂದು ಭಾಸ್ಕರ್ ರಾವ್ ಹೇಳಿದರು. ದುಷ್ಕೃತ್ಯಗಳನ್ನು ವರದಿ ಮಾಡುವ ಮಾಧ್ಯಮಗಳನ್ನು ಅವಮಾನಿಸುವುದು' ದೇಶದ್ರೋಹಿ ಘಟನೆಗಳು ನಡೆದೇ ಇಲ್ಲ ಎಂದು ಸಮರ್ಥಿಸಿಕೊಳ್ಳುವುದು ಸಮಾಜಕ್ಕೆ ಕೆಟ್ಟ ಸಂದೇಶವನ್ನು ರವಾನಿಸಿದಂತಾಗುತ್ತದೆ ಎಂದು ನುಡಿದ ಅವರು, ರಾಜ್ಯ ಸರ್ಕಾರ ರಾಜ್ಯವನ್ನು ಸುಭದ್ರವಾಗಿಡುವಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಪೂರಕವಾದ ಯೋಜನೆಗಳನ್ನು ಸರ್ಕಾರ ರೂಪಿಸಬೇಕೆಂದು ಹೇಳಿದರು.
‘ನಾನೂ ಆಕಾಂಕ್ಷಿ’
ಲೋಕಸಭಾ ಚುನಾವಣೆಗೆ ಸಂಬAಧಿಸಿದAತೆ ಬಿಜೆಪಿ ಪಕ್ಷದಿಂದ ನಾನೂ ಕೂಡ ಆಕಾಂಕ್ಷಿ ಎಂದು ತಿಳಿಸಿದ ಭಾಸ್ಕರ್ರಾವ್ ಪೊಲೀಸ್ ಇಲಾಖೆಯಲ್ಲಿ ಸೇವೆಯಲ್ಲಿದ್ದಾಗ ಕೊಡಗು ಹಾಗೂ ಮೈಸೂರಿನಲ್ಲಿ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದು, ಎರಡೂ ಜಿಲ್ಲೆಗಳ ಪರಿಚಯವಿದೆ. ಈ ನಿಟ್ಟಿನಲ್ಲಿ ಮೈಸೂರು -ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ಬಿಜೆಪಿ ವರಿಷ್ಠರಲ್ಲಿ ಮನವಿ ಮಾಡಿರುವುದಾಗಿ ಮಾಹಿತಿಯಿತ್ತರು.
ಗೋಷ್ಠಿಯಲ್ಲಿ ಬಿಜೆಪಿ ಪ್ರಮುಖರಾದ ಉಮಾಶಂಕರ್, ರವೀಂದ್ರ ಉಪಸ್ಥಿತರಿದ್ದರು.