ಮಡಿಕೇರಿ, ಮಾ. ೬: ರಾಜ್ಯದ ಕಾಂಗ್ರೆಸ್ ಸರ್ಕಾರ ಭಯೋತ್ಪಾದನಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಆರೋಪಿಸಿ ಜಿಲ್ಲೆಯ ಭಯೋತ್ಪಾದನಾ ಹೋರಾಟ ಸಮಿತಿ ವತಿಯಿಂದ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಭಯೋತ್ಪಾದನಾ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ೩ನಾಲ್ಕನೇ ಪುಟಕ್ಕೆ
(ಮೊದಲ ಪುಟದಿಂದ) ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಸಮಿತಿ ಸದಸ್ಯರಾದ ರಾಧಾಕೃಷ್ಣ ಅಡ್ಯಂತಾಯ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕ ಶಕ್ತಿಗಳ ಹುಟ್ಟಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದರು. ದೇಶವನ್ನು ಇಬ್ಬಾಗವಾಗಿ ಕತ್ತರಿಸಿದ್ದೇ ಕಾಂಗ್ರೆಸ್ ಎಂದು ಟೀಕಿಸಿದ ಅವರು, ಸ್ವಾತಂತ್ರö್ಯ ದೊರೆತ ಸಂದರ್ಭದಲ್ಲಿ ಹಿಂದೂ ಸಮಾಜ ಕಾಂಗ್ರೆಸ್ ಮೇಲಿಟ್ಟಿದ್ದ ವಿಶ್ವಾಸವನ್ನು ಉಳಿಸಿಕೊಳ್ಳದೆ ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಾ ಬಂದಿದೆ ಎಂದು ದೂರಿದರು. ಹಿಂದೂ ಸಮಾಜ ಜಾಗೃತಗೊಳ್ಳಬೇಕು ಎಂದು ಕರೆ ನೀಡಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ರವಿ ಕಾಳಪ್ಪ, ಪದಾಧಿಕಾರಿಗಳಾದ ಸುವಿನ್ ಗಣಪತಿ, ಕಾಂಗೀರ ಸತೀಶ್, ಉಮೇಶ್ ಸುಬ್ರಮಣಿ, ಜಿ.ಪಂ. ಮಾಜಿ ಅಧ್ಯಕ್ಷ ರವಿ ಕುಶಾಲಪ್ಪ, ನಗರಸಭಾ ಅಧ್ಯಕ್ಷೆ ಅನಿತಾಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್, ನಗರಸಭೆ ಬಿಜೆಪಿ ಸದಸ್ಯರುಗಳು, ಬಿಜೆಪಿಯ ವಿವಿಧ ಘಟಕಗಳ ಪದಾಧಿಕಾರಿಗಳು, ಸದಸ್ಯರು, ಹಿಂದೂಪರ ಸಂಘಟನೆಗಳ ಪ್ರಮುಖರಾದ ಕುಕ್ಕೇರ ಅಜಿತ್, ಚೇತನ್, ಬೋಜೆಗೌಡ, ಯೋಗೇಶ್, ಕುಮಾರ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.