ಮಡಿಕೇರಿ, ಮಾ. ೬: ‘ಬೇಟಿ ಬಚಾವೋ- ಬೇಟಿ ಪಡಾವೋ’ ಕಾರ್ಯ ಕ್ರಮದ ಅಂಗವಾಗಿ ಹೆಣ್ಣು ಮಕ್ಕಳಿಗಾಗಿ ಕಾರ್ಯಕ್ರಮಗಳು ನಡೆದವು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಆರೋಗ್ಯ ಇಲಾಖೆ ವತಿಯಿಂದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಮ್ಯಾರಥಾನ್ ಸ್ಪರ್ಧೆಯಲ್ಲಿ ನೂರಾರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಜಿಲ್ಲಾ ನ್ಯಾಯಾಧೀಶರು (ಪಿಡಿಜೆ) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಸಿ.ಶ್ಯಾಮಪ್ರಸಾದ್, ಸಿವಿಲ್ ಕಾನೂನು ಸೇವಾ ಪ್ರಾಧಿಕಾರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಆರೋಗ್ಯ ಇಲಾಖೆ ವತಿಯಿಂದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಮ್ಯಾರಥಾನ್ ಸ್ಪರ್ಧೆಯಲ್ಲಿ ನೂರಾರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಜಿಲ್ಲಾ ನ್ಯಾಯಾಧೀಶರು (ಪಿಡಿಜೆ) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಸಿ.ಶ್ಯಾಮಪ್ರಸಾದ್, ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಮ್ಯಾರಥಾನ್ ಉದ್ಘಾಟಿಸಿದರು.
ಈ ಸ್ಪರ್ಧೆಯಲ್ಲಿ ಮಡಿಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾ ವಸತಿ ನಿಲಯದ ೬ನೇ ತರಗತಿ ವಿದ್ಯಾರ್ಥಿನಿಯರಾದ ನಿಷ್ಮಾ ದೇಚಮ್ಮ ಪ್ರಥಮ, ಎಸ್.ವಿ.ಖುಷಿ ದ್ವಿತೀಯ, ಸಂತ ಮೈಕಲರ ಶಾಲೆಯ ೭ನೇ ತರಗತಿ ವಿದ್ಯಾರ್ಥಿನಿ ಪ್ರಕೃತಿ ತೃತೀಯ ಸ್ಥಾನ ಪಡೆದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಆಯುಕ್ತ ಬೇಬಿ ಮ್ಯಾಥ್ಯೂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್, ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ ಭಾಗವಹಿಸಿದ್ದರು.