ಸೋಮವಾರಪೇಟೆ, ಮಾ.೬: ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಸರ್-ಪಣಂಬೂರು, ಜಸ್ಟೀಸ್ ಕೆ.ಎಸ್.ಹೆಗ್ಗಡೆ ಚಾರಿಟೇಬಲ್ ಆಸ್ಪತ್ರೆ-ದೇರಳಕಟ್ಟೆ,ಮಂಗಳೂರು ಮತ್ತು ಗ್ರಾಮಾಭಿವೃದ್ಧಿ ಮಂಡಳಿ ಕುಮಾರಳ್ಳಿ-ಬಾಚಳ್ಳಿ ಇವರ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ತಾ. ೧೦ರಂದು ಶಾಂತಳ್ಳಿ ಜಿ.ಎಂ.ಪಿ.ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಆಯೋಜಕರಾದ ಮಾಜಿ ಸೈನಿಕ ಜಿ.ಡಿ.ಪೂವಯ್ಯ ತಿಳಿಸಿದ್ದಾರೆ.
ಸುತ್ತಮುತ್ತಲ ಗ್ರಾಮೀಣ ಭಾಗದ ಜನರು, ವಿದ್ಯಾರ್ಥಿಗಳು ಶಿಬಿರದ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅವಶ್ಯಕತೆ ಇದ್ದವರಿಗೆ ಉಚಿತ ಕನ್ನಡಕ ನೀಡಲಾಗುತ್ತದೆ. ಶಸ್ತçಚಿಕಿತ್ಸೆ ಅವಶ್ಯಕತೆಯಿದ್ದವರನ್ನು ಕೆ.ಎಸ್.ಹೆಗ್ಗಡೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಶಸ್ತçಚಿಕಿತ್ಸೆ ಮಾಡಿಸಲಾಗುವುದು. ಊಟ, ವಸತಿ, ಚಿಕಿತ್ಸೆ ಸಂಪೂರ್ಣ ಉಚಿತವಾಗಿರುತ್ತದೆ. ರಕ್ತದೊತ್ತಡ, ಮಧುಮೇಹ ಪರೀಕ್ಷೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ೯೨೪೨೯೮೭೦೧೬, ೮೬೧೮೮೮೫೮೪೬, ೮೨೭೭೩೮೫೯೮೫ ಸಂಪರ್ಕಿಸಬಹುದಾಗಿದೆ ಎಂದರು.