ಶ್ರೀ ಸಿದ್ಧಾಶ್ರಮ

ಮಡಿಕೇರಿ: ದಕ್ಷಿಣ ಕೊಡಗಿನ ಟಿ. ಶೆಟ್ಟಿಗೇರಿಯ ಶ್ರೀ ಸಿದ್ಧಾಶ್ರಮದಲ್ಲಿ ತಾ. ೮ ರಂದು ಮಹಾಶಿವರಾತ್ರಿ ಪ್ರಯುಕ್ತ ವಿವಿಧ ಪೂಜಾ ಕಾರ್ಯ ನೆರವೇರಲಿದೆ.

ತಾ. ೮ ರಂದು ಬೆಳಿಗ್ಗೆ ೬ ಗಂಟೆಯಿAದ ೭ ಗಂಟೆಯವರೆಗೆ ನಿತ್ಯಪೂಜೆ, ೭ ಗಂಟೆಯಿAದ ೮ ಗಂಟೆಯವರೆಗೆ ಪಂಚಾಕ್ಷರಿ ಭಜನೆ, ೮.೩೦ ರಿಂದ ೯ ಗಂಟೆಯವರೆಗೆ ಗಣಪತಿ ಹೋಮ, ೯ ಗಂಟೆಯಿAದ ೧೦ ಗಂಟೆಯವರೆಗೆ ಗೋಣಿಕೊಪ್ಪಲಿನ ಭಗವಾನ್ ಶ್ರೀ ಸತ್ಯ ಸಾಯಿಬಾಬ ಭಕ್ತವೃಂದದಿAದ ಭಜನೆ ಮತ್ತು ಸಂಕೀರ್ತನೆ, ೧೦ ರಿಂದ ೧೧ ಗಂಟೆಯವರೆಗೆ ಶಿವಲಿಂಗಕ್ಕೆ ಬಿಲ್ವಾರ್ಚನೆ, ಪಂಚಾಮೃತ, ರುದ್ರಾಭಿಷೇಕ, ಮಹಾಮಂಗಳಾರತಿ ಹಾಗೂ ಮಧ್ಯಾಹ್ನ ೧ ಗಂಟೆಗೆ ಅನ್ನಸಂತರ್ಪಣೆ ನಡೆಸಲಾಗುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೈಬುಲಿರ ಹರೀಶ್ ಅಪ್ಪಯ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮಾತಂಡ ಉತ್ತಯ್ಯ, ಕಳ್ಳಿಚಂಡ ಕೆ. ನಟರಾಜ್, ಡಾ. ಕೆ.ಕೆ. ಶಿವಪ್ಪ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣವನ್ನು ಕಾಳಿಮಾಡ ಕೆ. ಬೆಳ್ಯಪ್ಪ ಮಾಡುವರು. ಅನ್ನದಾನವನ್ನು ಕೈಬುಲಿರ ದಿ. ಮಾದಪ್ಪ-ಗೌರಮ್ಮ ಅವರ ಜ್ಞಾಪಕಾರ್ಥವಾಗಿ ಕೈಬುಲಿರ ಹರೀಶ್ ಅಪ್ಪಯ್ಯ ಮತ್ತು ಕುಸುಮ ಅಪ್ಪಯ್ಯ ಅವರು ಅನ್ನದಾನ ಏರ್ಪಡಿಸಿದ್ದಾರೆ ಎಂದು ಸಿದ್ಧಾಶ್ರಮದ ಪ್ರಕಟಣೆ ತಿಳಿಸಿದೆ.

ಇರ್ಪು ಶ್ರೀ ರಾಮೇಶ್ವರ ದೇವಾಲಯ

ಮಡಿಕೇರಿ: ದಕ್ಷಿಣ ಕೊಡಗಿನ ಶ್ರೀಮಂಗಲದ ಇರ್ಪು ಶ್ರೀ ರಾಮೇಶ್ವರ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ತಾ. ೮ ರಂದು ವಿವಿಧ ಪೂಜಾ ಕೈಂಕರ್ಯ ನೆರವೇರಲಿದೆ. ತಾ. ೮ ರಂದು ಬೆಳಿಗ್ಗೆ ೧೦.೩೦ಕ್ಕೆ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಸಲಾಗುವುದು. ತಾ. ೯ ರಂದು ಬೆಳಿಗ್ಗೆ ದೇವರ ಜಾತ್ರಾ ಮಹೋತ್ಸವ ಮತ್ತು ದೇವರ ಅವಭೃತ ಸ್ನಾನ ಮಹೋತ್ಸವ ಹಾಗೂ ಮಧ್ಯಾಹ್ನ ೧೨ ಗಂಟೆಯಿAದ ಅನ್ನದಾನ ಏರ್ಪಡಿಸಲಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

ಚೆಟ್ಟಳ್ಳಿ

ಚೆಟ್ಟಳ್ಳಿ: ಚೆಟ್ಟಳ್ಳಿಯಲ್ಲಿ ನಾಲ್ಕನೇ ವರ್ಷದ ಮಹಾಶಿವರಾತ್ರಿಯನ್ನು ಪೂಜಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿAದ ಆಚರಿಸಲಾಗುತ್ತದೆ ಎಂದು ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ, ಶ್ರೀ ಗೌರಿ ಗಣೇಶೋತ್ಸವ ಸಮಿತಿ, ಚೆಟ್ಟಳ್ಳಿ, ಶ್ರೀ ವಿನಾಯಕ ದೇವಾಲಯ ಸಮಿತಿ ಕೂಡ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ತಾ. ೮ ರಂದು ಸಂಜೆ ೫ ಗಂಟೆಗೆ ಈರಳೆವಳಮುಡಿ ಗ್ರಾಮದಲ್ಲಿರುವ ಪಂಚಮುಖಿ ವಾಯುಪುತ್ರ ಮೂರ್ತಿಗೆ ಸಹಕಾರ ಸಂಘದ ಮುಖ್ಯ ಕಚೇರಿಯಲ್ಲಿರುವ ಶ್ರೀ ವಿನಾಯಕ, ಪಶುಪತಿನಾಥ, ಕಾವೇರಿ ಮಾತೆಗೆ, ಶ್ರೀ ಕೃಷ್ಣ, ಗೋಮಾತೆ, ವಿಘ್ನೇಶ್ವರ ವೀರಾಂಜನೇಯ, ಮಹಾವಿಷ್ಣು ಮೂರ್ತಿಗೆ ಮಹಾಮಂಗಳಾರತಿ ನಡೆಯಲಿದೆ. ೩ ವರ್ಷದಿಂದ ೧೬ ವರ್ಷದೊಳಗಿನ ಛದ್ಮವೇಷಧಾರಿ ಮಕ್ಕಳೊಂದಿಗೆ ಸಹಕಾರ ಸಂಘದ ಮುಖ್ಯ ಕಚೇರಿಯಿಂದ ಶ್ರೀ ನರೇಂದ್ರ ಮೋದಿ ಸಹಕಾರ ಭವನದವರೆಗೆ ಮೆರವಣಿಗೆ ನಡೆಯಲಿದೆ.

ಸಂಜೆ ೭ ಗಂಟೆಗೆ ಗೋಣಿಕೊಪ್ಪಲಿನ ಯುವ ಗಾಯಕ ಅನ್ವಿತ್ ಕುಮಾರ್ ಸಿ.ವಿ. ಹಾಗೂ ದೀಪಿಕಾ ಆಚಾರ್ಯ ಉಡುಪಿ ಭಜನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ. ರಾತ್ರಿ ೮.೩೦ಕ್ಕೆ ಅನ್ನಸಂತರ್ಪಣೆ ನೆರವೇರಲಿದೆ ಎಂದು ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ.

ಈಸ್ಟ್ ಕೊಳಕೇರಿ ಶ್ರೀ ಮಹಾದೇವ ಕೋಟ ದೇವಾಲಯ

ನಾಪೋಕ್ಲು: ಈಸ್ಟ್ ಕೊಳಕೇರಿ ಗ್ರಾಮದ ಬಿದ್ದಾಟಂಡ ವಾಡೆ ಸಮೀಪದಲ್ಲಿರುವ ಶ್ರೀ ಮಹಾದೇವ ಕೋಟ ದೇವಾಲಯದಲ್ಲಿ ಪ್ರತೀ ವರ್ಷದಂತೆ ಮಹಾಶಿವರಾತ್ರಿಯನ್ನು ತಾ. ೮ ರಂದು ಆಚರಿಸಲಾಗುವುದು.

ದೇವಾಲಯದಲ್ಲಿ ತಾ. ೮ ರಂದು ಬೆಳಿಗ್ಗೆ ೯ ಗಂಟೆಯಿAದ ೧೧ ಗಂಟೆಯವರೆಗೆ ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕಾರ್ಯಗಳ ಬಳಿಕ ಮಧ್ಯಾಹ್ನ ೧೨ ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಬಿದ್ದಾಟಂಡ ಮುತ್ತಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಮಟೆ ಮಹಾದೇವರ ದೇವಾಲಯ

ಮಡಿಕೇರಿ: ಮಾಯಮುಡಿಯ ಕಮಟೆ ಮಹಾದೇವರ ದೇವಾಲಯದಲ್ಲಿ ತಾ. ೮ ರಂದು ಶಿವರಾತ್ರಿಯ ಪ್ರಯುಕ್ತ ವಿಶೇಷ ಪೂಜೆ ನಡೆಯಲಿದೆ.

ಅಂದು ರಾತ್ರಿ ೭ ಗಂಟೆಗೆ ದೇವಾಲಯದಲ್ಲಿ ಮಹಾದೇವರಿಗೆ ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದ್ದು, ಜಾಗರಣೆ ಪ್ರಯುಕ್ತ ಭಜನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಸಣ್ಣುವಂಡ ಬಿ. ರಮೇಶ್ ಹಾಗೂ ಕಾರ್ಯದರ್ಶಿ ಸಣ್ಣುವಂಡ ವಿನಯ್ ಅಯ್ಯಪ್ಪ ತಿಳಿಸಿದ್ದಾರೆ.

ಪೇರೂರು ಶ್ರೀ ಈಶ್ವರ ಇಗ್ಗುತಪ್ಪ ದೇವಾಲಯ

ನಾಪೋಕ್ಲು: ಸಮೀಪದ ಪೇರೂರು ಗ್ರಾಮದ ಶ್ರೀ ಈಶ್ವರ ಇಗ್ಗುತಪ್ಪ ದೇವಾಲಯದಲ್ಲಿ ತಾ. ೮ ರಂದು ಮಹಾಶಿವರಾತ್ರಿ ದಿನದಂದು ವಾರ್ಷಿಕೋತ್ಸವ ನಡೆಯಲಿದೆ. ಅಂದು ದೇವಾಲಯದಲ್ಲಿ ತುಲಾಭಾರ, ಮಹಾಪೂಜೆ, ಅನ್ನದಾನ, ದೇವರ ನೃತ್ಯಬಲಿ ನಡೆಯಲಿದೆ ಎಂದು ಆಡಳಿತ ಮಂಡಳಿ ಸದಸ್ಯರು ಹಾಗೂ ತಕ್ಕಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೊರೆನೂರು ಶ್ರೀ ಶನೇಶ್ಚರ ಸ್ವಾಮಿ ದೇವಾಲಯ

ಕುಶಾಲನಗರ: ತೊರೆನೂರು ಶ್ರೀ ಶನೇಶ್ಚರ ಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ ಮತ್ತು ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗ ಸಂಯುಕ್ತ ಆಶ್ರಯದಲ್ಲಿ ತಾ. ೮ ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಮತ್ತು ಜಾನಪದ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿ ಪ್ರಮುಖರಾದ ಕೆ.ಎಸ್. ಕೃಷ್ಣೇಗೌಡ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಮಹಾಶಿವರಾತ್ರಿ ಅಂಗವಾಗಿ ತಾ. ೮ ರಂದು ಬೆಳಿಗ್ಗೆ ದೇವಾಲಯದಲ್ಲಿ ಗಣಪತಿ ಹೋಮ, ವಿವಿಧ ಅಭಿಷೇಕಗಳು ನಂತರ ಸಾಮೂಹಿಕ ಮಹಾ ಮೃತ್ಯುಂಜಯ ಹೋಮವನ್ನು ನಡೆಸಲಾಗುವುದು. ಇದೇ ಸಂದರ್ಭ ದೇವಾಲಯ ಆವರಣದಲ್ಲಿ ತ್ರಿವಿಧ ದಾಸೋಹಿ ಪದ್ಮವಿಭೂಷಣ ಶ್ರೀ ಶಿವಕುಮಾರ್ ಸ್ವಾಮಿಗಳು ಮತ್ತು ಡಾ. ಬಾಲಗಂಗಾಧರನಾಥ ಸ್ವಾಮಿಗಳ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮತ್ತು ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಸಂಜೆ ೭ ಗಂಟೆಗೆ ವಿಶ್ವ ಮಹಿಳಾ ದಿನಾಚರಣೆ ಮತ್ತು ರಾಜ್ಯಮಟ್ಟದ ನೃತ್ಯ ಸ್ಪರ್ಧೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸದಾಶಿವ ಸ್ವಾಮೀಜಿಗಳು ಮತ್ತು ಶ್ರೀ ಮಲ್ಲೇಶ ಸ್ವಾಮಿಗಳು ಅವರ ದಿವ್ಯ ಸಾನಿಧ್ಯದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಂತರ್ ಗೌಡ ಉದ್ಘಾಟನೆ ಮಾಡಲಿದ್ದಾರೆ.

ದೇವಾಲಯ ಸಮಿತಿಯ ಅಧ್ಯಕ್ಷ ಪಿ.ಎ. ಮಾದಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭ ಮುಖ್ಯ ಭಾಷಣಕಾರರಾಗಿ ಉಪನ್ಯಾಸಕರಾದ ಡಾ. ಜಮೀರ್ ಅಹ್ಮದ್ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು. ಕನ್ನಡ ಸೇರಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕ ಮಹಿಳೆಯರನ್ನು ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಾನಪದ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ನೃತ್ಯ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವರು. ಮೊಬೈಲ್ ಸಂಖ್ಯೆ ೯೯೭೨೮೪೭೨೭೮ ಅಥವಾ ೯೯೮೦೯೮೮೮೧೨೩ ಸಂಪರ್ಕಿಸುವAತೆ ಕೋರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತೊರೆನೂರು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಬಿ. ಜಗದೀಶ್ ಇದ್ದರು.