ಮಡಿಕೇರಿ, ಮಾ. ೭: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ಪೆರಾಜೆ, ಚೆಂಬು, ಸಂಪಾಜೆ, ಮದೆನಾಡು, ಮೇಕೇರಿ ಹಾಗೂ ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ಸೇತುವೆ, ತಡೆಗೋಡೆ ಸೇರಿದಂತೆ ಸುಮಾರು ೨೫ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಗುರುವಾರ ಚಾಲನೆ ನೀಡಿದರು.
ಪೆರಾಜೆ ಗ್ರಾ.ಪಂ.ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಸೇತುವೆ ಕಾಮಗಾರಿ, ಹಾಗೆಯೇ ಚೆಂಬು ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ, ಆಟದ ಮೈದಾನ ನಿರ್ಮಾಣಕ್ಕಾಗಿ ಕ್ರೀಡಾ ಇಲಾಖೆಗೆ ೪ ಎಕರೆ ಭೂಮಿ ಹಸ್ತಾಂತರ, ತಡೆಗೋಡೆ ಉದ್ಘಾಟನೆ, ಮದೆನಾಡು ಗ್ರಾ.ಪಂ .ವ್ಯಾಪ್ತಿಯ ಕಾಟಕೇರಿ ಬಳಿ ೧೨.೬ ಕೋಟಿ ರೂ. ವೆಚ್ಚದಲ್ಲಿ ೬೬/೧೧ ಕೆವಿ ಸಾಮರ್ಥ್ಯದ ವಿದ್ಯುತ್ ಉಪ ಕೇಂದ್ರ ನಿರ್ಮಾಣಕ್ಕೆ ಭೂಮಿ ಪೂಜೆ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ೪ ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣ. ಹೀಗೆ ವಿವಿಧ ಗ್ರಾ.ಪಂ. ಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದರು.
ಸಾರ್ವಜನಿಕರ ಅಹವಾಲು ಆಲಿಸಿ ಮನವಿ ಪತ್ರಗಳನ್ನು ಸ್ವೀಕರಿಸಿ ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ಅಭಿವೃದ್ಧಿಗೆ ಸುಮಾರು ೨೫೦ ಕೋಟಿ ರೂ.ಗೆ ಅನುಮೋದನೆ ನೀಡಿದೆ ಎ.ಎಸ್.ಪೊನ್ನಣ್ಣ ಮಾಹಿತಿ ನೀಡಿದರು. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದAತೆ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ಈ ಸಂದರ್ಭ ಸಾರ್ವಜನಿಕ ರೊಬ್ಬರು ಮಾತನಾಡಿ, ಚೆಂಬು ಗ್ರಾ.ಪಂ. ಕಚೇರಿಯಿಂದ ಕುದುರೆಪಾಯ ಮಾರ್ಗದ ಮೂರು ಕಡೆಗಳಲ್ಲಿ ರಸ್ತೆಯನ್ನು ಅಗೆದು ಹಾಳು ಮಾಡಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು. ರಸ್ತೆ ಕಾಮಗಾರಿ ಹೆಸರಿನಲ್ಲಿ ದುರುಪಯೋಗ ಆಗಬಾರದು ಎಂದು ಶಾಸಕರ ಗಮನಕ್ಕೆ ತಂದರು.
ಈ ಸಂದರ್ಭ ಮಾತನಾಡಿದ ಪೊನ್ನಣ್ಣ ಅವರು ಯಾವುದೇ ಕಾಮಗಾರಿಯಲ್ಲಿ
(ಮೊದಲ ಪುಟದಿಂದ) ದುರುಪಯೋಗ ಕಂಡುಬAದರೆ ಅಂತಹ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.
ಮೇಲ್ಚೆAಬು ಭಾಗದಲ್ಲಿ ಆಟದ ಮೈದಾನ ನಿರ್ಮಾಣ ಸಂಬAಧ ಜಾಗ ಹಸ್ತಾಂತರ ಸಂದರ್ಭದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಿಕೊಡುವಂತೆ ಶಾಸಕರಲ್ಲಿ ಸ್ಥಳೀಯರು ಕೋರಿದರು.
ಚೆಂಬು ಗ್ರಾಮದ ಹೊಸೂರು ಸೂರಜ್ ಮಾತನಾಡಿ ಪೆರಾಜೆ, ಚೆಂಬು, ಸಂಪಾಜೆ ಭಾಗಕ್ಕೆ ಪೊನ್ನಣ್ಣ ಅವರು ಹೆಚ್ಚಿನ ಅನುದಾನ ಒದಗಿಸಿ ಮೂಲ ಸೌಲಭ್ಯಕ್ಕೆ ಒತ್ತು ನೀಡಿದ್ದಾರೆ. ಹಾಗೆಯೇ ದೇವಾಲಯಗಳ ಅಭಿವೃದ್ಧಿಗೂ ಸಹ ಕೈಜೋಡಿಸಿದ್ದಾರೆ ಎಂದು ಹೇಳಿದರು.
ಪ್ರಮುಖರಾದ ಎಂ.ಲಕ್ಷö್ಮಣ ಮಾತನಾಡಿ ಎ.ಎಸ್.ಪೊನ್ನಣ್ಣ ಅವರು ವೀವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಆಗಬೇಕಿರುವ ಕೆಲಸಗಳಿಗೆ ಸಂಬAಧಿಸಿದAತೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಲಿದ್ದಾರೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ಪ್ರಮುಖರಾದ ಧರ್ಮಜ ಉತ್ತಪ್ಪ, ಇಸ್ಮಾಯಿಲ್, ಕೊಲ್ಯದ ಗಿರೀಶ್, ತೆನ್ನಿರಾ ಮೈನಾ, ಸುರೇಶ್, ಶಶಿ ಇತರರು ಇದ್ದರು.