ಸೋಮವಾರಪೇಟೆ, ಮಾ. ೭: ಇಲ್ಲಿನ ಲಯನ್ಸ್ ಕ್ಲಬ್, ಲಿಯೋ ಕ್ಲಬ್, ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಹಾಗೂ ಮೈಸೂರಿನ ಭಾರತ್ ಕ್ಯಾನ್ಸರ್ ಆಸ್ಪತ್ರೆ, ಹೆಚ್.ಸಿ.ಜಿ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ತಾ.೧೧ ರಂದು ಸ್ಥಳೀಯ ಮಹಿಳಾ ಸಮಾಜದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಜೇಸೀ ಸಂಸ್ಥೆಯ ಅಧ್ಯಕ್ಷ ಎಸ್.ಆರ್. ವಸಂತ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಹೆಚ್ಚಿನ ಮಾಹಿತಿ ಹಾಗೂ ಪೂರ್ವ ನೋಂದಣಿಗಾಗಿ ಮೊ: ೯೪೪೮೫೮೫೫೮೬, ೯೮೮೦೩೯೪೭೧೨ ನ್ನು ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.