ಮಾಡಿಕೇರಿ, ಮಾ. ೯: ಶಾಂತಳ್ಳಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತಾ.೧೦ ರಂದು (ಇಂದು) ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಲಿದೆ. ಬೆಳಿಗ್ಗೆ ೯ ಗಂಟೆಗೆ ಪ್ರಾರಂಭವಾಗಿ ಮಧ್ಯಾಹ್ನ ೧೨:೩೦ ವರೆಗೆ ಶಿಬಿರ ನಡೆಯಲಿದೆ. ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಸರ್ಸ್, ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ ಹಾಗೂ ಕುಮಾರಳ್ಳಿ ಗ್ರಾಮಾಭಿವೃದ್ಧಿ ಸಮಿತಿ ಸಹಯೋಗದಿಂದ ಶಿಬಿರ ನಡೆಯಲಿದೆ.