ಮಡಿಕೇರಿ, ಮಾ. ೯: ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯಾದ್ಯಂತ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮಗಳÀ ಬಗ್ಗೆ ಸಾರ್ವಜನಿಕರÀಲ್ಲಿ ಜಾಗೃತಿ ಮೂಡಿಸಲು ತಾ. ೧೦ರಂದು (ಇಂದು) ಕರ್ನಾಟಕ ಪೊಲೀಸ್ ರನ್ ಕಾರ್ಯP್ರÀಮವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ.

ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಕುಶಾಲನಗರದಲ್ಲಿ ಬೆಳಿಗ್ಗೆ ೮ ಗಂಟೆಗೆ ಸಮೀಪದ ಮಾದಪಟ್ಟಣ ಬಳಿ ಸರಕಾರಿ ಇಂಜಿನಿಯರಿAಗ್ ಕಾಲೇಜು ಆವರಣದಿಂದ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸದಸ್ಯರು ವಾಕÀಥಾನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕುಶಾಲನಗರ ಮುಖ್ಯ ರಸ್ತೆ ಮೂಲಕ ಆಗಮಿಸುವ ವಾಕಥಾನ್ ಕುಶಾಲನಗರ ಪಟ್ಟಣದ ಪೊಲೀಸ್ ಠಾಣೆ ಮೂಲಕ ತೆರಳಿ ಆಂಜನೇಯ ದೇವಾಲಯ ಕಡೆಯಿಂದ ರಥಬೀದಿ ಮೂಲಕ ಸಾಗಿ ಕುಶಾಲನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಕೊನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿರುತ್ತಾರೆ ಎಂದು ಡಿವೈಎಸ್ಪಿ ಗಂಗಾಧರಪ್ಪ ತಿಳಿಸಿದ್ದಾರೆ.