ಮಡಿಕೇರಿ, ಮಾ. ೧೦: ಕರ್ನಾಟಕ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರಲು ಆದ್ಯತೆ ನೀಡುವುದಾಗಿ ಸರ್ಕಾರದ ಗ್ಯಾರಂಟಿಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಕೊಡಗು ಮೂಲದ ಮೆಹರೋಜ್ ಖಾನ್ ಹೇಳಿದರು.

‘ಶಕ್ತಿ’ ಸಂದರ್ಶನದಲ್ಲಿ ಮಾತನಾಡಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳು ಶೇ. ೯೦ರಷ್ಟು ಅನುಷ್ಠಾನಗೊಂಡಿದ್ದು, ಫಲಾನುಭವಿಗಳ ದಾಖಲಾತಿ ಕೊರತೆ, ತಾಂತ್ರಿಕ ಸಮಸ್ಯೆಗಳಿಂದಾಗಿ ಅಲ್ಲಲ್ಲಿ ಸಮಸ್ಯೆ ಸೃಷ್ಟಿಯಾಗಿದೆ. ಈ ಸಂಬAಧ ಎಲ್ಲಾ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದ್ದು, ಗ್ಯಾರಂಟಿಗಳ ಅನುಷ್ಠಾನಕ್ಕೆ ಅಗತ್ಯ ಚರ್ಚೆ ನಡೆಸಲಾಗಿದೆ. ಇನ್ನೆರಡು ತಿಂಗಳ ಒಳಗಾಗಿ ಸಮಸ್ಯೆಗಳು ಬಗೆಹರಿಯಲಿವೆ ಎಂದು ಮೆಹರೋಜ್ ಖಾನ್ ಹೇಳಿದರು. ಕಳೆದ ಡಿಸೆಂಬರ್ ತಿಂಗಳಲ್ಲಿ ಆರಂಭವಾದ ಯುವ ನಿಧಿ ಯೋಜನೆಯಲ್ಲಿ ಸಮಯಾವಕಾಶದ ಕೊರತೆಯಿಂದ ಫಲಾನುಭವಿ ಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬAದಿಲ್ಲವಾದರೂ, ಮುಂದಿನ ಶೈಕ್ಷಣಿಕ ವರ್ಷದಿಂದ ಇದೂ ಕೂಡ ಪರಿಣಾಮಕಾರಿಯಾಗಿ ಜಾರಿಯಾಗಲಿದೆ ಎಂದರು.

ಕೊಡಗಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಸಂಬAಧ ತಾನು ಈಗಾಗಲೇ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ. ಪಾಟೀಲ್ ಅವರನ್ನು ಭೇಟಿ ಮಾಡಿ ಕೊಡಗಿನಲ್ಲಿ ತಜ್ಞರ ಸಭೆ ನಡೆಸುವಂತೆ ಮನವಿ ಮಾಡಿದ್ದು, ಲೋಕಸಭಾ ಚುನಾವಣೆ ಬಳಿಕ ಕೊಡಗಿನಲ್ಲಿ ಸಭೆ ನಡೆಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದರು. ೩ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೊಡಗು - ಮೈಸೂರು ಕ್ಷೇತ್ರದಲ್ಲಿ ಗೆಲ್ಲುವ ಉತ್ತಮ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಿದೆ. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಜನಪರ ಕಾರ್ಯಕ್ರಮಗಳೇ ಕಾಂಗ್ರೆಸ್‌ಗೆ ಶ್ರೀರಕ್ಷೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಮೆಹರೋಜ್ ಖಾನ್ ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಿ ಮೋದಿಯವರು ಭಾವನೆಗಳ ಮೇಲೆ ರಾಜಕೀಯ ಮಾಡುತ್ತಾರೆ; ಕಾಂಗ್ರೆಸ್ ತನ್ನ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಚುನಾವಣೆ ಎದುರಿಸಲಿದೆ ಎಂದು ಅವರು ಹೇಳಿದರು. -ಉಜ್ವಲ್