ಕುಶಾಲನಗರ, ಮಾ. ೯: ಸ್ನೇಹಿತರೊಂದಿಗೆ ಕಾವೇರಿ ನದಿಯಲ್ಲಿ ಈಜಲು ತೆರಳಿದ ಸಂದರ್ಭ ಯುವಕನೊಬ್ಬ ಮುಳುಗಿ ಸಾವಿಗೀಡಾದ ಘಟನೆ ಕುಶಾಲನಗರ ಸಮೀಪ ನಂಜರಾಯಪಟ್ಟಣ ಗ್ರಾಮದ ದಾಸವಾಳ ಬಳಿ ನಡೆದಿದೆ.
ಚೆಟ್ಟಳ್ಳಿ ಸಮೀಪದ ಕಂಡಕೆರೆ ಗ್ರಾಮದ ಶಂಭು ಎಂಬವರ ಪುತ್ರ ಶರತ್( ೨೪) ಎಂಬಾತ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ದೈವಿ.
ಸ್ನೇಹಿತರಾದ ಕಿಶನ್, ಪ್ರವೀಣ್, ಸುನಿಲ್ ಎಂಬವರೊAದಿಗೆ ಶನಿವಾರ ಮಧ್ಯಾಹ್ನದ ವೇಳೆ ನದಿಗೆ ಈಜಲು ತೆರಳಿದಾಗ ಈ ಘಟನೆ ಸಂಭವಿಸಿದೆ.
ಮೃತ ಶರತ್ ವೀರಾಜಪೇಟೆಯ ವಿದ್ಯುತ್ ಇಲಾಖೆ ಕಚೇರಿಯಲ್ಲಿ ತಾತ್ಕಾಲಿಕ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ಎಂದು ಆತನ ಸ್ನೇಹಿತರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ದೊರೆತ ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮೋಹನ್ ರಾಜ್ ಸ್ಥಳಕ್ಕೆ ತೆರಳಿ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.