ಮಡಿಕೇರಿ, ಮಾ. ೯: ಸುಂಟಿಕೊಪ್ಪದ ಎಸ್ಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಶರಫಿ ಪದವಿ ಪಡೆದು ಉನ್ನತ ವಿದ್ಯಾಭ್ಯಾಸಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಸಯ್ಯದ್ ಮುಹಮ್ಮದ್ ಅಲಿ ಶಿಹಾಬ್ ತಂಗಳ್ ಶಿಕ್ಷಣ ಸಂಸ್ಥೆಯಲ್ಲಿ ೬ ವರ್ಷಗಳ ಕಾಲ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಪೂರ್ಣಗೊಳಿಸಿ ಶರಫಿ ಪದವಿಯನ್ನು ಪಡೆದು ಉನ್ನತ ಶಿಕ್ಷಣಕ್ಕಾಗಿ ದಕ್ಷಿಣ ಏಷ್ಯಾದ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾದ ಜಾಮಿಯಾ ನುರಿಯ ಅರಬಿಕ್ ಕಾಲೇಜ್ಗೆ ತೆರಳುತ್ತಿರುವ ವಿದ್ಯಾರ್ಥಿಗಳನ್ನು ಎಸ್ಎಂಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಪೋಷಕರು ಸಂಭ್ರಮದಿAದ ಬೀಳ್ಕೊಟ್ಟರು. ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಸಿ.ಎಂ. ಅಬ್ದುಲ್ ಹಮೀದ್ ಮೌಲವಿ ಆರ್ಥಿಕ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಡ ಮಕ್ಕಳಿಗೆ ಉತ್ತಮ ಹಾಗೂ ಉನ್ನತ ಶಿಕ್ಷಣವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡುವ ಮೂಲಕ ಸಂಸ್ಥೆ ಶ್ರೇಷ್ಠವಾದ ಕೊಡುಗೆಯನ್ನು ನೀಡುತ್ತಿದೆ ಮತ್ತು ಸೇವೆಯನ್ನು ಮಾಡುತ್ತಿದೆ ಎಂದರು.
ಇದೇ ಸಂದರ್ಭ ಖುರಾನ್ ಅನ್ನು ಪೂರ್ತಿಯಾಗಿ ಕಂಠಪಾಠ
ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಹಾಫಿಝ್ ಪದವಿಯನ್ನು ನೀಡಲಾಯಿತು. ಮಾಜಿ ಶಾಸಕರು ಹಾಗೂ ಸಂಸ್ಥೆಯ ಮಹಾ ಮುಖ್ಯಸ್ಥರೂ ಆದ ಕೆ.ಎಂ.ಇಬ್ರಾಹಿA ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಉಪಕಾಝಿ ಹಾಗೂ ಸಂಸ್ಥೆಯ ಉಪಾಧ್ಯಕ್ಷ ಎಂ.ಎA. ಅಬ್ದುಲ್ಲ ಫೈಝಿ ಅವರು ಸಭೆಯನ್ನು ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲರಾದ ಜೈನುದ್ದೀನ್ ಫೈಝಿಯವರು ಮುಖ್ಯ ಪ್ರಭಾಷಣ ಮಾಡಿದರು.ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಹಾಫಿಝ್ ಪದವಿಯನ್ನು ನೀಡಲಾಯಿತು. ಮಾಜಿ ಶಾಸಕರು ಹಾಗೂ ಸಂಸ್ಥೆಯ ಮಹಾ ಮುಖ್ಯಸ್ಥರೂ ಆದ ಕೆ.ಎಂ.ಇಬ್ರಾಹಿA ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಉಪಕಾಝಿ ಹಾಗೂ ಸಂಸ್ಥೆಯ ಉಪಾಧ್ಯಕ್ಷ ಎಂ.ಎA. ಅಬ್ದುಲ್ಲ ಫೈಝಿ ಅವರು ಸಭೆಯನ್ನು ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲರಾದ ಜೈನುದ್ದೀನ್ ಫೈಝಿಯವರು ಮುಖ್ಯ ಪ್ರಭಾಷಣ ಮಾಡಿದರು.