ಸುಂಟಿಕೊಪ್ಪ, ಮಾ. ೯: ಕಾನ್‌ಬೈಲ್ ಗ್ರಾಮದ ಕಾಫಿ ಬೆಳೆಗಾರರಾದ ನೀಲಮ್ಮ ಪೆಮ್ಮಯ್ಯ ಅವರು ಕಾನ್‌ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಅಕ್ಷರ ದಾಸೋಹದ ಭೋಜನ ಸವಿಯಲು ಊಟದ ಸ್ಟೀಲ್ ತಟ್ಟೆ ಹಾಗೂ ಲೋಟಗಳನ್ನು ವಿತರಿಸಿದರು.

ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ವಾಣಿ, ಶಾಂತಿ, ಯಶೋಧ ಹಾಗೂ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿ ಯಶೋಧ ಬಸವರಾಜ್ ಹಾಗೂ ಖತೀಜ ಇದ್ದರು.