ಕುಶಾಲನಗರ, ಮಾ. ೧೦: ಯುವ ಪೀಳಿಗೆ ದುಶ್ಚಟಗಳಿಂದ ದೂರವಿದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವ ಅಂಗವಾಗಿ ರಾಜ್ಯಾದ್ಯಂತ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕುಶಾಲನಗರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಬೃಹತ್ ವಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಸಂಪೂರ್ಣ ಕೆಡುತ್ತದೆ. ಕೊಡಗು ಜಿಲ್ಲೆಯಲ್ಲಿ ೨೦೨೧ ರಲ್ಲಿ ೧೭ ಗಾಂಜಾ ಮತ್ತು ಮಾದಕ ವಸ್ತುಗಳ ಪ್ರಕರಣಗಳು ದಾಖಲಾಗಿದ್ದು ೩೬ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ೨೦೨೨ ರಲ್ಲಿ ೨೧ ಪ್ರಕರಣಗಳು ದಾಖಲಾಗಿದ್ದು ೪೯ ಮಂದಿ ಬಂಧನಕ್ಕೆ ಒಳಗಾಗಿದ್ದರು. ೨೦೨೩ ರಲ್ಲಿ ಜಿಲ್ಲೆಯಲ್ಲಿ ೧೦೧ ಪ್ರಕರಣಗಳು ಕಂಡುಬAದಿದ್ದು ೨೩೪ ಮಂದಿಯನ್ನು ಬಂಧಿಸಲಾಗಿದೆ. ೨೦೨೪ರ ಅವಧಿಯ ಎರಡು ತಿಂಗಳ ಒಳಗೆ ೧೬ ಪ್ರಕರಣಗಳು ದಾಖಲಾಗಿದ್ದು ೩೧ ಮಂದಿ ಬಂಧನಕ್ಕೆ ಒಳಗಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಇದರೊಂದಿಗೆ ಗಾಂಜಾ ಎಂಡಿಎA, ಎಲ್ಎಸ್ಡಿ ಕೋಕೇನ್ ಮತ್ತಿತರ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣವೊಂದರಲ್ಲಿ ಮೂರು ವ್ಯಕ್ತಿಗಳಿಗೆ ನ್ಯಾಯಾಲಯ ಹತ್ತು ವರ್ಷ ಸಜೆ ವಿಧಿಸಿದೆ ಎಂದು ಅವರು ಮಾಹಿತಿ ಒದಗಿಸಿದರು.
ಮಡಿಕೇರಿ ಶಾಸಕ ಡಾ ಮಂತರ್ ಗೌಡ ಮಾತನಾಡಿ, ಜಿಲ್ಲೆಗೆ ನುಸುಳುವ ಡ್ರಗ್ಸ್ ದಂಧೆಯನ್ನು ಶಾಶ್ವತವಾಗಿ ಕಡಿವಾಣ ಹಾಕುವ ನಿಟ್ಟಿನಲ್ಲಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ ಅಗತ್ಯ ಎಂದರಲ್ಲದೆ ಇಂತಹ ದಂಧೆಯಲ್ಲಿ ಪಾಲ್ಗೊಳ್ಳುವ ಆರೋಪಿಗಳಿಗೆ ವಕೀಲರು ಜಾಮೀನು ನೀಡಲು ಸಹಕಾರ ನೀಡಬಾರದು. ಆ ಮೂಲಕ ಮಾದಕ ವಸ್ತು ದಂಧೆಗೆ ಶಾಶ್ವತ ಕಡಿವಾಣ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕುಶಾಲನಗರ ಮಡಿಕೇರಿ ರಸ್ತೆಯ ಮಾದಾಪಟ್ಟಣ ಗ್ರಾಮ ಬಳಿ ಇರುವ ಸರಕಾರಿ ಇಂಜಿನಿಯರಿAಗ್ ಕಾಲೇಜ್ ಬಳಿಯಿಂದ ಹೊರಟ ವಾಕಥಾನ್ ಮುಖ್ಯ ರಸ್ತೆಯ ಮೂಲಕ ಕುಶಾಲನಗರ ಪಟ್ಟಣಕ್ಕೆ ಬಂದು ಬೈಪಾಸ್ ರಸ್ತೆ ಮೂಲಕ ರಥಬೀದಿಗೆ ತೆರಳಿ ನಂತರ ಕುಶಾಲನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಅಂತ್ಯಗೊAಡಿತು.
ಕೊಡಗು ಜಿಲ್ಲೆಯ ವಿವಿಧೆಡೆಯ ೨೫೦ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು, ಕುಶಾಲನಗರ ಮಾಜಿ ಸೈನಿಕರ ಸಂಘ, ರೋಟರಿ ರೆಡ್ ಕ್ರಾಸ್ ಸಂಸ್ಥೆ, ಲಯನ್ಸ್ ಜೆಸಿಸ್ ಸ್ಥಳೀಯ ಚೇಂಬರ್ ಆಫ್ ಕಾಮರ್ಸ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳು ವಾಕಥಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ ರಾಜ್ ಹಾಗೂ ಸೋಮವಾರಪೇಟೆ ಪೊಲೀಸ್ ಉಪ ಅಧೀಕ್ಷಕ ಆರ್.ವಿ. ಗಂಗಾಧರಪ್ಪ ಅವರ ನೇತೃತ್ವದಲ್ಲಿ ನಡೆದ ಬೃಹತ್ ವಾಕಥಾನ್ನಲ್ಲಿ ಮಡಿಕೇರಿ ಡಿವೈಎಸ್ಪಿ ಮಹೇಶ್ ಕುಮಾರ್, ವೀರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ಗಳು, ವೃತ್ತ ನಿರೀಕ್ಷಕರು ಠಾಣಾಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು, ರಾಜಕೀಯ ಮುಖಂಡರುಗಳು, ನಾಗರಿಕರು ಪಾಲ್ಗೊಂಡಿದ್ದರು.