ಮಡಿಕೇರಿ, ಮಾ. ೧೦: ತಾಲೂಕಿನ ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೫೨ ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.

ಕಾಮಗಾರಿ ಗುಣಮಟ್ಟ ಮತ್ತು ಅವಧಿಯ ಬಗ್ಗೆ ನಿಗಾವಹಿಸುವಂತೆ ಮಂತರ್ ಗೌಡ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಸೂಚಿಸಿದರು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ಕೆಪಿಸಿಸಿ ಪ್ರಮುಖರಾದ ಟಿ.ಪಿ. ರಮೇಶ್, ವಲಯ ಕಾಂಗ್ರೆಸ್ ಅಧ್ಯಕ್ಷ ಕೇಶವ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಖಾ, ಸದಸ್ಯರುಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ಡಿಸಿಸಿ ಸದಸ್ಯರಾದ ಜಾನ್ಸನ್ ಪಿಂಟೋ, ಪ್ರಮುಖರಾದ ದೀರ್ಘಕೇಶಿ ಶಿವಣ್ಣ, ಮುಂಡAಡ ಭಾಗೇಶ್, ರಘು, ವಿ.ಜಿ. ಮೋಹನ್, ಹರಿಪ್ರಸಾದ್, ಶಿವಕುಮಾರ್, ಧನಂಜಯ, ಮಹಮ್ಮದಾಲಿ ಸೇರಿದಂತೆ ಅಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.