ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯೆ ಬಿ.ಎಸ್. ಪುಷ್ಪ, ಲ್ಯಾಬ್ ಟೆಕ್ನಿಷಿನ್ ಲೀಲಾವತಿ, ಆಶಾ ಕಾರ್ಯಕರ್ತೆ ರಾಜೇಶ್ವರಿ, ಮಂಜುಳಾ, ಭವಾನಿ ಮತಿತ್ತರರು ಉಪಸ್ಥಿತರಿದ್ದರು.

ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರ ಶನಿವಾರಸಂತೆ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಟರಿ ಸಂಸ್ಥೆಯ ಸಹಯೋಗದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಇಂದೂಧರ್ ನೇತೃತ್ವದಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಮೆಯನ್ನು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಕ್ಷಿತ್ ನೆರವೇರಿಸಿದರು. ನರ್ಸಿಂಗ್ ಅಧಿಕಾರಿ ದಿವ್ಯಾ ಹಾಗೂ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಸರಸ್ವತಿ, ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್, ಶುಶ್ರೂಷಕಿ ಶ್ವೇತಶ್ರೀ, ಪ್ರಥಮ ದರ್ಜೆ ಸಹಾಯಕ ಪ್ರವೀಣ್, ಲ್ಯಾಬ್ ಟೆಕ್ನಿನಿಷಿಯನ್ ರಶೀದ್, ಸಿಬ್ಬಂದಿ ಸಚಿನ್, ಸತ್ಯನಾರಾಯಣ, ಧರ್ಮ, ವಿಜೇತ್, ಆಶಾ ಕಾರ್ಯಕರ್ತೆಯರಾದ ಜಯಮ್ಮ, ವಿಶಾಲಿ, ಅಂಗನವಾಡಿ ಕಾರ್ಯಕರ್ತೆ ಸೌಭಾಗ್ಯ ಹಾಜರಿದ್ದರು.

ಕಾರ್ಯಕ್ರಮದಲ್ಲಿ ೧೩೫ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಯಿತು. ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ. ರಕ್ಷಿತ್ ಪೋಲಿಯೋ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿದರು.

ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ಸುಂಟಿಕೊಪ್ಪ: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಸ್ ನಿಲ್ದಾಣದ ಕೇಂದ್ರಗಳಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಗ್ರಾ.ಪಂ. ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಅವರು ಚಾಲನೆ ನೀಡಿದರು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾ.ಪಂ. ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಹಾಗೂ ವೈದ್ಯಾಧಿಕಾರಿ ಶಮ್ನ, ಆರೋಗ್ಯ ಶೂಶ್ರಷಕಿಯರು, ಆರೋಗ್ಯ ಸಹಾಯಕಿಯರು, ದಾದಿಯರು, ಅಂಗನವಾಡಿ ಕಾರ್ಯ ಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾ.ಪಂ. ಸದಸ್ಯರುಗಳಾದ ಪಿ.ಎಫ್. ಸಬಾಸ್ಟೀನ್, ರಫೀಕ್ ಖಾನ್, ಶಾಂತಿ ಹಾಗೂ ಮತ್ತಿತರರು ಇದ್ದರು.

ನಲ್ವತ್ತೋಕ್ಲು ಪೊನ್ನಂಪೇಟೆ: ವೀರಾಜಪೇಟೆ ಸಮೀಪದ ನಲ್ವತ್ತೋಕ್ಲು ಗ್ರಾಮದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಜರುಗಿತು. ಸ್ಥಳೀಯ ಅಂಗನವಾಡಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಳಗುಂದ ಗ್ರಾ.ಪಂ. ಸದಸ್ಯ ಪಿ.ಎ. ಹನೀಫ್ ಅವರು ಮಗುವಿಗೆ ಪೋಲಿಯೋ ಲಸಿಕೆಯ ಹನಿ ಹಾಕುವುದರ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ. ಗ್ರಾ.ಪಂ. ಮಾಜಿ ಸದಸ್ಯ ಚಿಲ್ಲವಂಡ ಕಾವೇರಪ್ಪ, ಸಮುದಾಯ ಸಮುದಾಯ ಆರೋಗ್ಯ ಅಧಿಕಾರಿ ಕಲಾಂಜಲಿ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರಾದ ಎ.ಜಿ. ಕಮಲ, ಪಿ.ಹೆಚ್. ಸಾಕಿರ ಮೊದಲಾದವರು ಉಪಸ್ಥಿತರಿದ್ದರು.

ಗುಡ್ಡೆಹೊಸೂರು ಸರಕಾರಿ ಶಾಲೆ ಗುಡ್ಡೆಹೊಸೂರು: ಇಲ್ಲಿನ ಸರಕಾರಿ ಶಾಲಾ ಆವರಣದಲ್ಲಿ ನಡೆದ ಪಲ್ಸ್ ಪೋಲಿಯೋ ಕೇಂದ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ಇಲ್ಲಿನ ಗ್ರಾಮ ಪಂಚಾಯಿತಿ ಸದಸ್ಯರಾದ ಬಿ.ಎಂ. ಪ್ರದೀಪ್ ಚಾಲನೆ ನೀಡಿದರು. ಈ ಸಂದರ್ಭ ಈ ವಿಭಾಗದ ವೈದ್ಯರಾದ ಡಾ. ಪ್ರತಾಪ್ ಸಾಗರ್ ಹಾಜರಿದ್ದು ಮಕ್ಕಳಿಗೆ ಪೋಲಿಯೋ ಹನಿ ನೀಡಿದರು. ಈ ಕಾರ್ಯವನ್ನು ಇಲ್ಲಿನ ಕಿರಿಯ ಆರೋಗ್ಯ ಸಹಾಯಕಿ ಭವಾನಿ ಗ್ರಾ.ಪಂ ಸದಸ್ಯೆ ಉಷಾ ಯತೀಶ್, ಅಂಗನವಾಡಿ ಕಾರ್ಯಕರ್ತೆಯರಾದ ಕವಿತ, ರೂಪ ಹಾಗೂ ಆಶಾ ಕಾರ್ಯಕರ್ತೆ ರುಕ್ಮಿಣಿ ಮುಂತಾದವರು ಹಾಜರಿದ್ದರು.