ಸಿದ್ದಾಪುರ, ಮಾ. ೧೧: ನೆಲ್ಲಿಹುದಿಕೇರಿ ಗ್ರಾಮದ ನಲ್ವತ್ತೆಕರೆಯ ಶ್ರೀ ವಿನಾಯಕ ಸೇವಾ ಸಮಿತಿ ಹಾಗೂ ಶ್ರೀ ವಿನಾಯಕ ಮಿತ್ರ ಮಂಡಳಿಯ ವತಿಯಿಂದ ಸುಳ್ಯ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಇವರ ಸಹಯೋಗದಲ್ಲಿ ನೆಲ್ಲಿಹುದಿಕೇರಿಯ ಶಾದಿಮಹಲ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ನೆಲ್ಲಿಹುದಿಕೇರಿ ಸ್ವರ್ಣ ಕ್ಲಿನಿಕ್ನ ವೈದ್ಯ ಡಾ. ಉದಯಕುಮಾರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮನುಷ್ಯನಿಗೆ ಹಣಕ್ಕಿಂತಲು ಆರೋಗ್ಯ ಮುಖ್ಯ ಎಂದರು.
ಯೂನಿಸ್ ಮಾತನಾಡಿ, ಶ್ರೀ ವಿನಾಯಕ ಮಿತ್ರ ಮಂಡಳಿಯು ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿದೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿಯ ಅಧ್ಯಕ್ಷೆ ಟಿ.ಆರ್. ಮಣಿ, ಎ.ಬಿ. ಸತೀಶ್, ವೈದ್ಯಾಧಿಕಾರಿಗಳಾದ ಡಾ. ರಾಘವೇಂದ್ರ, ಡಾ. ರಂಗನಾಥ್, ಡಾ. ವಿನಯ್ ಭಾರದ್ವಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷಿö್ಮ, ಉಪಾಧ್ಯಕ್ಷೆ ಪ್ರಮೀಳ ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಪಿ.ಆರ್. ಭರತ್, ಮಾಲ್ದಾರೆ ಸತೀಶ್ ಹಾಗೂ ವಿನಾಯಕ ಮಿತ್ರ ಮಂಡಳಿಯ ಪದಾಧಿಕಾರಿಗಳು ಇನ್ನಿತರರು ಹಾಜರಿದ್ದರು. ರಿಯಾಜ್ ಸ್ವಾಗಿತಿಸಿ, ಯೂನಿಸ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.