ಸೋಮವಾರಪೇಟೆ, ಮಾ. ೧೧: ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆಯಡಿ ರಾಜ್ಯಮಟ್ಟದಲ್ಲಿ ಉತ್ತಮ ಪ್ರಗತಿ ಸಾಧನೆ ಸಾಧಿಸಿದ ಹಿನ್ನೆಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟಿçÃಯ ಜೀವನೋಪಾಯ ಅಭಿಯಾನದ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ, ಸಮಾರಂಭದಲ್ಲಿ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಅವರು ಪ್ರಶಸ್ತಿ ಸ್ವೀಕರಿಸಿದರು.

ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕರಾದ ಶ್ರೀವಿದ್ಯಾ ಅವರು ಪ್ರಶಸ್ತಿ ವಿತರಿಸಿದರು. ಈ ಸಂದರ್ಭ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.ಸ್ತಿ