ಕೂಡಿಗೆ, ಮಾ. ೧೧: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಕಂಡುಬರುತ್ತಿರುವ ಹಿನ್ನೆಲೆ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ಕೂಡುಮAಗಳೂರು, ಕೂಡಿಗೆ, ತೊರೆನೂರು ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಜಲ ಮೂಲದ ಮಾಹಿತಿ, ವಿವಿಧ ಗ್ರಾಮಗಳಲ್ಲಿ ಕೈಗೊಂಡಿರುವ ಮಾಹಿತಿಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪರಿವೀಕ್ಷಕ ಸಂತೋಷ್, ಅಭಿವೃದ್ಧಿ ಅಧಿಕಾರಿ ಮಂಜುಳಾ, ಸಂತೋಷ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.