ಕಣಿವೆ, ಮಾ. ೧೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ನಿವಾಸಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ.

ಪಂಚಾಯಿತಿ ವ್ಯಾಪ್ತಿಯ ಅನೇಕ ಕೊಳವೆ ಬಾವಿಗಳಲ್ಲಿ ಅಂತರ್ಜಲ ಕುಸಿತಗೊಂಡಿದ್ದು ಕೊಳವೆ ಬಾವಿಗಳು ತಟಸ್ಥಗೊಂಡಿರುವುದರಿAದ ಕಳೆದ ಎಂಟು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ನಿವಾಸಿಗಳ ಸಮಸ್ಯೆಗಳನ್ನು ಮನಗಂಡ ಗ್ರಾ.ಪಂ ಸದಸ್ಯ ಕೆ.ಬಿ.ಷಂಶುದ್ದೀನ್ ಟ್ಯಾಂಕರ್ ಮೂಲಕ ನೀರನ್ನು ಪೂರೈಸಲು ಕ್ರಮ ಕೈಗೊಂಡಿದ್ದಾರೆ.

ಸಮಸ್ಯೆ ಬಗ್ಗೆ ಶಾಸಕ ಡಾ.ಮಂತರ್ ಗೌಡರ ಗಮನಕ್ಕೆ ತರಲಾಗಿದೆ. ಶಾಸಕರು ಆದಷ್ಟು ಬೇಗನೇ ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡಿದ್ದಾರೆ ಎಂದು ಷಂಶುದ್ದೀನ್ ತಿಳಿಸಿದ್ದಾರೆ.