ಕುಶಾಲನಗರ, ಮಾ. ೧೧: ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಕುಶಾಲನಗರದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಅಂಗವಾಗಿ ಕಥೆಗಾರ್ತಿ ಕೊಡಗಿನ ಗೌರಮ್ಮ ಅವರ ೧೧೨ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕುಶಾಲನಗರ ಸರಕಾರಿ ಬಾಲಕಿರ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸಾಹಿತಿ ಫ್ಯಾನ್ಸಿ ಮುತ್ತಣ್ಣ ಉದ್ಘಾಟಿಸಿದರು.

ಸಾಧನೆಗಳ ಮೂಲಕ ಮಾತ್ರ ನೆನಪು ಉಳಿಯಲು ಸಾಧ್ಯ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಉಪನ್ಯಾಸಕಿ ಲೀಲಾ ಕುಮಾರಿ ತೋಡಿಕಾನ ಮಾತನಾಡಿ ಸರ್ಕಾರಿ ಶಾಲೆಗಳ ಮೂಲಕ ಮಾತ್ರ ಕನ್ನಡ ಭಾಷೆ ಉಳಿವು ಸಾಧ್ಯ ಎಂದರು.

ಪ್ರೌಢಶಾಲೆ ಮುಖ್ಯ ಶಿಕ್ಷಕಿ ಪುಷ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭ ಮಹಿಳಾ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಉದ್ಯಮಿ ಆವರ್ತಿ ಮಹದೇವಪ್ಪ, ಶಾಲಾ ಶಿಕ್ಷಕರ ವೃಂದ ಉಪಸ್ಥಿತರಿದ್ದರು. ಶಿಕ್ಷಕಿ ತುಳಸಿ ಕಾರ್ಯಕ್ರಮ ನಿರೂಪಿಸಿದರು.