ಬೆAಗಳೂರು, ಮಾ. ೧೨: ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಮುಂದುವರಿದಿದ್ದ ೫, ೮ ಹಾಗೂ ೯ನೇ ತರಗತಿಗಳ ಬೋರ್ಡ್ ಪರೀಕ್ಷೆ ಮುಂದಿನ ಆದೇಶದವರೆಗೆ ಮುಂದೂಡಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

ರಾಜ್ಯ ಪಠ್ಯಕ್ರಮದ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗÀ ಮಾಡುತ್ತಿರುವ ೫, ೮ ಹಾಗೂ ೯ನೇ ತರಗತಿ ವಿದ್ಯಾರ್ಥಿಗಳಿಗೆ ೨೦೨೩-೨೪ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ ಮೌಲ್ಯಂಕನ ನಡೆಸುವ ಸಂಬAಧ ಉಚ್ಚನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣ ಏಕ ಸದಸ್ಯ ಪೀಠದಲ್ಲಿ ರದ್ದಾಗಿತ್ತು. ಈ ತೀರ್ಪಿನ ವಿರುದ್ಧ ಸರಕಾರವು ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಪೀಠ ಮೌಲ್ಯಂಕನ ಮುಂದುವರೆಸಲು ತೀರ್ಪು ನೀಡಿತ್ತು. ಇದರನ್ವಯ ಬೋರ್ಡ್ ಪರೀಕ್ಷೆ ಆರಂಭಗೊAಡಿತ್ತು.

ನಂತರ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪು ಪ್ರಶ್ನಿಸಿ ಖಾಸಗಿ ಅನುದಾನ ರಹಿತ ಶಾಲೆಗಳು ಸರ್ವೋಚ್ಚ ನ್ಯಾಯಾಲಯದಲ್ಲಿ ಧಾವೆ ಹೂಡಿದ್ದವು. ವಿಚಾರಣೆ ನಡೆಸಿದ ನ್ಯಾಯಾಲಯದ ಮಧ್ಯಂತರ ತೀರ್ಪು ರದ್ದುಗೊಳಿಸಿ ಪ್ರಕರಣವನ್ನು ವಿಭಾಗೀಯ ಪೀಠಕ್ಕೆ ರವಾನಿಸಿತ್ತು. ಆದರಿಂದ ೫, ೮ ಹಾಗೂ ೯ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈಗಾಗಲೇ ಪರೀಕ್ಷೆಗಳು ನಡೆಯುತ್ತಿದ್ದವು. ಇದರಿಂದ ವಿದ್ಯಾರ್ಥಿಗಳು, ಪೋಷಕರು ಮತ್ತಷ್ಟು ಗೊಂದಲಕ್ಕೆ ಈಡಾಗಿದ್ದಾರೆ.

ಅನಗತ್ಯ ಒತ್ತಡ

ಬೋರ್ಡ್ ಪರೀಕ್ಷೆಗಳನ್ನು ಪರಿಚಯಿಸಲು ಕರ್ನಾಟಕ ಸರ್ಕಾರ ಮತ್ತು ಶಿಕ್ಷಣ ಮಂಡಳಿಯ ನಿರ್ಧಾರವು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಮೇಲೆ ಅನಗತ್ಯ ಒತ್ತಡವನ್ನು ಉಂಟುಮಾಡಿದೆ. ಈ ಅನಗತ್ಯ ಹೊರೆಯು ಕಲಿಕಾ ಪ್ರಕ್ರಿಯೆಯನ್ನು ಅಡ್ಡಿಪಡಿಸುತ್ತದೆ ಮತ್ತು ಅನಗತ್ಯ ಒತ್ತಡವನ್ನು ಉಂಟುಮಾಡುತ್ತದೆ. ಸರ್ಕಾರವು ಪರೀಕ್ಷೆಯ ವಿಷಯದಲ್ಲಿ ಸೂಕ್ತ ನಿರ್ಧಾರವನ್ನು ಕೂಡಲೇ ಹೊರಡಿಸಬೇಕು ಹಾಗೂ ಪೋಷಕರ ಮತ್ತು ಮಕ್ಕಳ ಗೊಂದಲವನ್ನು ನಿವಾರಿಸಬೇಕು ಎಂದು ಅನುದಾನರಹಿತ ಶಾಲೆಗಳ ಆಡಳಿತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಕೋಟ್ರಂಗಡ ತಿಳಿಸಿದ್ದಾರೆ.