ಮಡಿಕೇರಿ, ಮಾ. ೧೩: ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ವತಿಯಿಂದ ತಾ. ೧೫ರಂದು ನಗರದ ಕಾವೇರಿ ಹಾಲ್‌ನಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಹಮ್ಮಿಕೊಳ್ಳಲಾ ಗಿದೆ ಎಂದು ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಅಪ್ಪುç ರವೀಂದ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಮಾವೇಶವನ್ನು ಬೆಳಿಗ್ಗೆ ೧೦ ಗಂಟೆಗೆ ರಾಜ್ಯ ಬಿಜೆಪಿ ಓಬಿಸಿ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಅಶ್ವಥನಾರಾಯಣ್, ಸಂಸದ ಪ್ರತಾಪ್ ಸಿಂಹ, ಮಾಜಿ ವಿಧಾನ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಅಪ್ಪಚ್ಚು ರಂಜನ್, ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೂ ಮುನ್ನ ಹಳೆ ಖಾಸಗಿ ಬಸ್ ನಿಲ್ದಾಣದ ಬಳಿಯಿಂದ ಕಾವೇರಿ ಹಾಲ್‌ವರೆಗೆ ಮೆರೆವಣಿಗೆ ನಡೆಯಲಿದೆ ಎಂದು ಅಪ್ಪುç ರವೀಂದ್ರ ಮಾಜಿ ಸಚಿವ ಅಶ್ವಥನಾರಾಯಣ್, ಸಂಸದ ಪ್ರತಾಪ್ ಸಿಂಹ, ಮಾಜಿ ವಿಧಾನ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಅಪ್ಪಚ್ಚು ರಂಜನ್, ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೂ ಮುನ್ನ ಹಳೆ ಖಾಸಗಿ ಬಸ್ ನಿಲ್ದಾಣದ ಬಳಿಯಿಂದ ಕಾವೇರಿ ಹಾಲ್‌ವರೆಗೆ ಮೆರೆವಣಿಗೆ ನಡೆಯಲಿದೆ ಎಂದು ಅಪ್ಪುç ರವೀಂದ್ರ ಕಾರ್ಯದರ್ಶಿ ವಿ.ಕೆ. ಲೋಕೇಶ್ ಮಾತನಾಡಿ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವ ದಡಿ ಕೇಂದ್ರ ಬಿಜೆಪಿ ಸರ್ಕಾರ ಆಡ ಳಿತ ನಡೆಸುತ್ತಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಓಬಿಸಿ ಮೋರ್ಚಾದ ಮಡಿಕೇರಿ ನಗರ ಅಧ್ಯಕ್ಷ ಗಜೇಂದ್ರ (ಕುಶ), ಮಡಿಕೇರಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಬಿ.ಎಂ. ಪ್ರತೀಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಪೂಜಾರಿ ಉಪಸ್ಥಿತರಿದ್ದರು.