ಕುಶಾಲನಗರ, ಮಾ. ೧೩: ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ಗ್ರಾಮಗಳಿಗೆ ಕುಡಿಯುವ ನೀರಿನ ಪೂರೈಕೆ ವ್ಯತ್ಯಯ ಉಂಟಾಗಲಿರುವ ಸಾಧ್ಯತೆ ಅಧಿಕವಾಗಿರುವುದರಿಂದ ಸ್ಥಳೀಯ ಜಲಮಂಡಳಿ ಅಧಿಕಾರಿಗಳು ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಅವರೊಂದಿಗೆ ಚರ್ಚೆ ನಡೆಸಿದರು.

ಪಟ್ಟಣದ ವ್ಯಾಪ್ತಿಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಹರಿವು ಸಂಪೂರ್ಣ ಸ್ಥಗಿತಗೊಂಡಿದೆ. ಪಂಪ್ ಹೌಸ್ ಬಳಿ ನೀರು ಎತ್ತಲು ಅಗತ್ಯವಾದ ನೀರಿನ ಸಂಗ್ರಹದ ಕೊರತೆ ಕಂಡುಬರುತ್ತದೆ ಎಂದು ಕರ್ನಾಟಕ ರಾಜ್ಯ ಒಳಚರಂಡಿ ಮತ್ತು ಕುಡಿಯುವ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರದ ಪ್ರಸನ್ನಕುಮಾರ್ ಶಾಸಕರಿಗೆ ಸಮಗ್ರ ಮಾಹಿತಿ ಒದಗಿಸಿದರು.

ಪಟ್ಟಣದ ಹಾಗೂ ಮುಳ್ಳುಸೋಗೆ ಗ್ರಾಮ ಪ್ರದೇಶಗಳಿಗೆ ಕಾವೇರಿ ನದಿಯಿಂದ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಮಂಡಳಿ ವತಿಯಿಂದ ನಿರ್ವಹಣೆ ಮಾಡಲಾಗುತ್ತಿದ್ದು ಬೈಚನಹಳ್ಳಿ ಬಳಿ ನೀರಿನ ಹರಿವು ನದಿಯಲ್ಲಿ ಸ್ಥಗಿತಗೊಂಡಿದೆ. ಪರ್ಯಾಯ ವ್ಯವಸ್ಥೆಗಳ ಬಗ್ಗೆ ಮಂಡಳಿ ಮೂಲಕ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಮಾಹಿತಿ ಒದಗಿಸಿದರು.

ಶಾಸಕ ಡಾ. ಮಂತರ್ ಗೌಡ ನಾಗರಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ನದಿಯಲ್ಲಿ ನೀರಿನ ಹರಿವು ಯಥಾಸ್ಥಿತಿಗೆ ಬರುವ ತನಕ ಪರ್ಯಾಯ ವ್ಯವಸ್ಥೆ ಮೂಲಕ ನಾಗರಿಕರಿಗೆ ಕುಡಿಯುವ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಈ ಸಂದರ್ಭ ಜಲ ಮಂಡಳಿ ಅಧಿಕಾರಿ ಆನಂದ್, ಕುಶಾಲನಗರ ಪುರಸಭೆ ಇಂಜಿನಿಯರ್ ಗಂಗಾರಾA ಇದ್ದರು.