ವೀರಾಜಪೇಟೆ, ಮಾ. ೧೩: ಮಹಿಳೆಗೆ ಸಮಾಜದಲ್ಲಿ ಗೌರವ ಹಾಗೂ ಸ್ಥಾನಮಾನವನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ವೀರಾಜಪೇಟೆಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಸಂತೋಷ್ ಕೊಠಾರಿ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಮಹಿಳಾ ಘಟಕ ಹಾಗೂ ವಕೀಲರ ಸಂಘ, ತಾಲೂಕು ಕಾನೂನು ಸಮಿತಿಯ ಸಹಯೋಗದಲ್ಲಿ ನಡೆದ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ವೀರಾಜಪೇಟೆ, ಮಾ. ೧೩: ಮಹಿಳೆಗೆ ಸಮಾಜದಲ್ಲಿ ಗೌರವ ಹಾಗೂ ಸ್ಥಾನಮಾನವನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ವೀರಾಜಪೇಟೆಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಸಂತೋಷ್ ಕೊಠಾರಿ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಮಹಿಳಾ ಘಟಕ ಹಾಗೂ ವಕೀಲರ ಸಂಘ, ತಾಲೂಕು ಕಾನೂನು ಸಮಿತಿಯ ಸಹಯೋಗದಲ್ಲಿ ನಡೆದ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆ ಪುರುಷರಿಗೆ ಸಮಾನಳು. ತಾಯಿಯಾಗಿ, ಮಡದಿಯಾಗಿ, ಸಹೋದರಿಯಾಗಿ ಹೆಣ್ಣು ಮಹತ್ವದ ಪಾತ್ರವನ್ನು ವಹಿಸುತ್ತಾಳೆ. ಹೆಣ್ಣನ್ನು ಕೀಳಾಗಿ ಕಾಣುವ ಮನೋಭಾವ ಹೋಗಲಾಡಿಸಿ, ಭ್ರೂಣ ಹತ್ಯೆ ನಿಲ್ಲಿಸಿ ಹೆಣ್ಣಿಗೆ ಗೌರವವನ್ನು ನೀಡುವಂತಾಗಬೇಕು ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲ ರಾದ ಸಿಂಧೂರ ಎನ್ ಸ್ವಾಮಿ ಮಾತನಾಡಿ, ಇತಿಹಾಸದ ಕಾಲದಿಂದಲೂ ಮಹಿಳೆಗೆ ಪ್ರಾಮುಖ್ಯತೆ ಕೊಡಲಾಗಿದೆ. ಸ್ವಾತಂತ್ರö್ಯದ ನಂತರ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ. ೧೯೭೧ ರಲ್ಲಿ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ. ಮಾತನಾಡಿ, ಮಹಿಳೆ ಇಂದು ಅನೇಕ ಕ್ಷೇತ್ರಗಳಲ್ಲಿ ಉನ್ನತಿ ಸಾಧಿಸಿದ್ದಾಳೆ. ದೇಶದ ಪ್ರಮುಖ ಹುದ್ದೆಯನ್ನು ಅಲಂಕರಿಸುವುದರ ಜೊತೆಗೆ ಬಾಹ್ಯಾಕಾಶದವರೆಗೆ ಅನೇಕ ಸಾಧನೆಗಳನ್ನು ಮಾಡಿದ್ದಾಳೆ ಎಂದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ.ಜಿ. ಅಪ್ಪಣ್ಣ, ಕಾಲೇಜಿನ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥರು ಹಾಗೂ ಮಹಿಳಾ ಘಟಕದ ಸಂಚಾಲಕಿ ದಿವ್ಯ. ಆರ್ ಮತ್ತು ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.