ನಾಪೋಕ್ಲು, ಮಾ. ೧೩: ನಾಪೋಕ್ಲು ಸಮೀಪದ ಹೊದ್ದೂರು ಗ್ರಾಮದಲ್ಲಿ ಪುನರ್ ನಿರ್ಮಾಣಗೊಂಡ ಭಗವತಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳು ಶುಕ್ರವಾರ ಆರಂಭಗೊAಡು ಭಾನುವಾರ ರಾತ್ರಿ ದೇವಾಲಯದಲ್ಲಿ ಆಶ್ಲೇಷ ಬಲಿ ಜರುಗಿತು.

ರೂ. ೧.೫ ಕೋಟಿ ವೆಚ್ಚದಲ್ಲಿ ದೇವಾಲಯ ಪುನರ್ ನಿರ್ಮಾಣಗೊಂಡಿದ್ದು ವಾಸ್ತುಪೂಜೆ, ಕಲಶ ಪೂಜೆ, ವಾಸ್ತು ಬಲಿ ಅಂಕುರ ಆರೋಹಣ, ವಿಗ್ರಹ ಪರಿಗ್ರಹ ದೀಪಾರಾಧನೆ ನಡೆಯಿತು. ಭಾನುವಾರ ಸಂಜೆ ದೀಪಾರಾಧನೆ, ಅಂಕುರ ಪೂಜೆ, ತ್ರಿಕಾಲ ಪೂಜೆ ನಡೆಯಿತು.

ಬಲಿ ಅಂಕುರ ಆರೋಹಣ, ವಿಗ್ರಹ ಪರಿಗ್ರಹ ದೀಪಾರಾಧನೆ ನಡೆಯಿತು. ಭಾನುವಾರ ಸಂಜೆ ದೀಪಾರಾಧನೆ, ಅಂಕುರ ಪೂಜೆ, ತ್ರಿಕಾಲ ಪೂಜೆ ನಡೆಯಿತು.

ಬ್ರಹ್ಮ ಶ್ರೀ ಕೆ.ಯು ಪದ್ಮನಾಭ ತಂತ್ರಿಗಳು ಮತ್ತು ಬಳಗ ದೇವಾಲಯದ ಮುಖ್ಯ ಅರ್ಚಕ ಶ್ರೀಕಾಂತ್, ದೇವಸ್ಥಾನದ ತಕ್ಕ ಮುಖ್ಯಸ್ಥರು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಚೌರಿರ ಕೆ. ಮೇದಪ್ಪ, ದೇವತಕ್ಕ ನೆರವಂಡ ಸಂಜಯ್ ಪೂಣಚ್ಚ, ಸಮಿತಿ ಸದಸ್ಯ ಚೌರಿರ ಉದಯ ಸೇರಿದಂತೆ ಸಮಿತಿ ಸದಸ್ಯರು ಊರಿನ ಮತ್ತು ಪರ ಊರಿನ ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.