ಮಡಿಕೇರಿ, ಮಾ. ೧೪: ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸಂಬAಧ ಕೊಡಗು ಜಿಲ್ಲೆಗೆ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಅವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಂಜಯ ಜೀವಿಜಯ, ಶಾರಿ ಗಿರೀಶ, ಭೀಮಯ್ಯ ಕೆ.ಸಿ., ನಾಸೀರ್ ಸಿ.ಎ., ಪಂಕಜ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದೆ. ಹಾಗೆಯೇ ಕೃಷ್ಣ ಕುಟ್ಟಂಡ, ಅಣ್ಣಯ್ಯ, ಅಬ್ದುಲ್ ರಹೀಮಾನ್, ಸುಂದರ್, ಬಶೀರ್ ಕೆ.ಎಂ., ಮುಸ್ತಾಪ, ಹರಿ ಪ್ರಸಾದ್, ಪಿ.ಎಲ್.ಸುರೇಶ್, ಧನ್ಯ, ಕೆ.ಜಿ.ಪೀಟರ್, ವಿ.ಪಿ.ಶಶಿಧರ್, ಕಾಂತರಾಜ್, ಎಂ.ಜಿ. ಮೋಹನ್ ದಾಸ್, ಜಾನ್ಸನ್, ಪ್ರಶಾಂತ್ ಕೆ.ಎ, ಇವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿದೆ. ಸದಸ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ ಇವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಿದೆ.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಶಕ್ತಿ, ಗೃಹಜ್ಯೋತಿ, ಗೃಹಲಕ್ಷಿö್ಮ, ಅನ್ನಭಾಗ್ಯ, ಮತ್ತು ಯುವ ನಿಧಿ ಯೋಜನೆಗಳು ಈಗಾಗಲೇ ಜಾರಿಗೊಂಡಿದ್ದು, ಈ ಗ್ಯಾರಂಟಿ ಯೋಜನೆಯ ಲಾಭ ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುತ್ತಿದೆಯೇ ಎಂಬ ಬಗ್ಗೆ ಮೇಲ್ವಿಚಾರಣೆಗಾಗಿ ಸಾಂಸ್ಥಿಕ ಕಾರ್ಯ ವಿಧಾನಗಳನ್ನು ಜಾರಿಗೆ ತರಲು ಕೊಡಗು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸದಸ್ಯ ಕಾರ್ಯದರ್ಶಿಯನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.