ಮಡಿಕೇರಿ, ಮಾ. ೧೪: ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕುಸಿತ ಪ್ರಕರಣಕ್ಕೆ ಸಂಬAಧಿಸಿದAತೆ ವಿಧಾನಸಭೆಯ ಅರ್ಜಿಗಳ ಸಮಿತಿ ಇಂದು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ತಡೆಗೋಡೆಯ ಪರಿಶೀಲನೆ ನಡೆಸಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡು ಸಭೆ ನಡೆಸಿದ ಸಮಿತಿ ತಡೆಗೋಡೆ ಕಾಮಗಾರಿಯ ಬಗ್ಗೆ ವಿವರ ಮಾಹಿತಿ ಪಡೆಯಿತು. ನಂತರ ತಡೆಗೋಡೆಯ ದುರಸ್ತಿ ಅಥವಾ ಪರ್ಯಾಯ ಕಾಮಗಾರಿ ಸಂಬAಧ ಮರು ಪರಿಶೀಲನೆ ನಡೆಸಿ ವಿಸ್ತೃತವಾದ ಕ್ರಿಯಾಯೋಜನೆಯನ್ನು ಮುಂದಿನ ಹದಿನೈದು ದಿನಗಳ ಒಳಗೆ ಸಮಿತಿಗೆ ಸಲ್ಲಿಸುವಂತೆ ಸೂಚನೆ ನೀಡಿತು.
ಸುಮಾರು ೭ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಜರ್ಮನ್ ತಂತ್ರಜ್ಞಾನದ ಜಿಲ್ಲಾಧಿಕಾರಿ ಭವನದ ತಡೆಗೋಡೆ ಅವೈಜ್ಞಾನಿಕವಾಗಿರುವ ಬಗ್ಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಸರ್ಕಾರದ ಗಮನ ಸೆಳೆದು ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರು. ಅಲ್ಲದೆ ಕಾಂಗ್ರೆಸ್ ಮುಖಂಡ ತೆನ್ನೀರಾ ಮೈನಾ ಕೂಡ ಈ ಸಂಬAಧ ಸರ್ಕಾರಕ್ಕೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ವಿಧಾನ ಸಭೆಯ ಅರ್ಜಿಗಳ ಸಮಿತಿ ನಗರಕ್ಕೆ ಆಗಮಿಸಿತ್ತು ಸಮಿತಿ ಸದಸ್ಯರಾದ ಶಾಸಕರುಗಳಾದ ಎಸ್. ಸುರೇಶ್ ಕುಮಾರ್,
(ಮೊದಲ ಪುಟದಿಂದ) ಸಿ.ಬಿ. ಸುರೇಶ್ ಬಾಬು, ಎ. ಮಂಜು, ಮಹೇಂದ್ರ ಕಲ್ಲಪ್ಪ, ತಮ್ಮಣ್ಣನವರ ಇವರುಗಳು ಶಾಸಕ ಮಂತರ್ ಗೌಡ ಸಮ್ಮುಖದಲ್ಲಿ ಸಂಬAಧಪಟ್ಟ ಅಧಿಕಾರಿಗಳೊಂದಿಗೆ ತಡೆಗೋಡೆಯ ಪರಿಶೀಲನೆ ನಡೆಸಿದರು. ಅಧಿಕಾರಿಗಳೊಂದಿಗೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್. ಸುರೇಶ್ ಕುಮಾರ್ ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಪ್ರಕರಣ ಇದುವರೆಗೂ ಪರಿಹಾರ ಕಂಡಿಲ್ಲ. ಈ ವಿಚಾರವಾಗಿ ವಿಧಾನಸಭೆ ಅರ್ಜಿಗಳ ಸಮಿತಿ ಬೆಂಗಳೂರಿನಲ್ಲಿ ಮೂರು ಸಭೆಗಳನ್ನು ನಡೆಸಿದ್ದು, ಬಳಿಕ ಇಂದು ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ನಾಲ್ಕನೇ ಸಭೆಯನ್ನು ನಡೆಸಿದೆ. ಲೋಕೋಪಯೋಗಿ ಇಲಾಖೆ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ಸಂಬAಧಿಸಿದ ಇಲಾಖೆಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲಾಗಿದ್ದು ತಡೆಗೋಡೆ ಸಮಸ್ಯೆ ಪರಿಹಾರಕ್ಕೆ ಸಂಬAಧಪಟ್ಟAತೆ ಡಿಪಿಆರ್ ವರದಿಯನ್ನು ೧೫ ದಿನದೊಳಗೆ ಸಲ್ಲಿಸುವಂತೆ ಸೂಚಿಸಿದ್ದೇವೆ. ವರದಿ ಸಿಕ್ಕ ಬಳಿಕ ಸಮಿತಿ ಪರಿಶೀಲಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ ಎಂದು ತಿಳಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಮಿತಿ ಸದಸ್ಯರಾದ ಡಾ. ಮಂತರ್ ಗೌಡ ಮಾತನಾಡಿ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆಗೆ ಸಂಬAಧಿಸಿದAತೆ ಹಲವು ಬಾರಿ ಸರ್ಕಾರದ ಗಮನ ಸೆಳೆಯಲಾಗಿತ್ತು. ಆ ನಿಟ್ಟಿನಲ್ಲಿ ವಿಧಾನಸಭೆಯ ಅರ್ಜಿ ಸಮಿತಿ ಸದಸ್ಯರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದು, ತಾಂತ್ರಿಕ ತಜ್ಞರು ನೀಡುವ ವರದಿಯಂತೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ಮುಂದಿನ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ
ರೀತಿಯ ತೊಂದರೆಯಾಗದAತೆ ಗಮನಹರಿಸಲಾಗುವುದು. ತಡೆಗೋಡೆ ಸಂಬAಧ ಸರ್ಕಾರದ ಗಮನ ಸೆಳೆದು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಓ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸತ್ಯನಾರಾಯಣ, ಅಂದಾಜು ಸಮಿತಿಯ ಜಯಪ್ರಸಾದ್, ಸದಸ್ಯರಾದ ಭುರ್ಜಿ, ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕರಾದ ಶಿವಕುಮಾರ್ ಇತರರು ಸಮಿತಿ ಸದಸ್ಯರಿಗೆ ಹಲವು ಮಾಹಿತಿ ನೀಡಿದರು.
ತಂಬಾಕು ಸೇವನೆಯಿಂದ ಆಗುತ್ತಿರುವ ಅಪಾಯ ಕುರಿತು ಮಾತನಾಡಿದ ಎಸ್. ಸುರೇಶ್ ಕುಮಾರ್ ಅವರು ಡ್ರಗ್ಸ್, ಹೆರಾಯಿನ್ ಮತ್ತಿತರ ಮಾದಕ ವಸ್ತುಗಳಿಗೆ ಯಾರೂ ಸಹ ದಾಸರಾಗಬಾರದು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು.
ಶಿಕ್ಷಣ, ಆರೋಗ್ಯ, ಪೊಲೀಸ್, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳು ಡ್ರಗ್ಸ್ ನಿಯಂತ್ರಣಕ್ಕೆ ಸಂಬAಧಿಸಿದAತೆ ನಿರಂತರವಾಗಿ ಜಾಗೃತಿ ವಹಿಸಬೇಕಿದೆ ಎಂದು ಸಲಹೆ ನೀಡಿದರು. ಡ್ರಗ್ಸ್ ವಿರುದ್ಧ ಪ್ರತಿಯೊಬ್ಬರೂ ಹೋರಾಟ ಮಾಡಬೇಕು. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದು ವಿವರಿಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಗಾಂಜಾ, ಹೆರಾಯಿನ್ ಸೇರಿದಂತೆ ಡ್ರಗ್ಸ್ ನಿಯಂತ್ರಣಕ್ಕೆ ಸಂಬAಧಿಸಿದAತೆ ಕಾಲ ಕಾಲಕ್ಕೆ ತಪಾಸಣೆ ಮಾಡಿ, ತಪ್ಪು ಕಂಡುಬAದ ಹಲವರನ್ನು ಬಂಧಿಸಲಾಗಿದೆ. ಡ್ರಗ್ಸ್ ನಿಯಂತ್ರಣ ಮಾಡಲು ಗಡಿ ಪ್ರದೇಶಗಳು ಸೇರಿದಂತೆ ಎಲ್ಲೆಡೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಶಾಸಕ ಡಾ.ಮಂತರ್ ಗೌಡ ಮಾತನಾಡಿ ಡ್ರಗ್ಸ್, ಮಾದಕ ವಸ್ತು ನಿಯಂತ್ರಣ ಸಂಬAಧ ಗಡಿ ಪ್ರದೇಶದ ಚೆಕ್ಪೋಸ್ಟ್ಗಳಲ್ಲಿ ಅಗತ್ಯ ತಪಾಸಣೆ ಮಾಡಬೇಕು ಎಂದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಸಿದ್ದೇಗೌಡ, ಎಇಇ ಗಿರೀಶ್ ಇತರರು ಇದ್ದರು.