ಐಗೂರು, ಮಾ. ೧೪: ಸ.ಹಿ. ಪ್ರಾಥಮಿಕ ಶಾಲೆ ಕಾಜೂರಿನಲ್ಲಿ ಆಂಗ್ಲ ಮಾಧ್ಯಮದ ಎಲ್.ಕೆ.ಜಿ. ತರಗತಿಗಳ ಮಕ್ಕಳ ದಾಖಲಾತಿಗಳು ಪೋಷಕರಿಗೆ ಕಡಿಮೆ ಖರ್ಚಿನಲ್ಲಿ ಪ್ರಾರಂಭವಾಗಿರುವುದರಿAದ ಐಗೂರು ವ್ಯಾಪ್ತಿಯ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲಕರವಾಗಿದೆ. ಈ ಭಾಗದ ಪೋಷಕರು ತಮ್ಮ ಮಕ್ಕಳನ್ನು ಕಾಜೂರು ಶಾಲೆಯ ಆಂಗ್ಲ ಮಾಧ್ಯಮ ಎಲ್ ಕೆ ಜಿ ತರಗತಿಗೆ ದಾಖಲಿಸಿ ಎಂದು ಐಗೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಕಾಜೂರು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸದಸ್ಯರೂ ಆದ ಜಿ.ಕೆ. ವಿನೋದ್ ಕರೆ ನೀಡಿದರು. ಮುಖ್ಯ ಶಿಕ್ಷಕಿ ಸರಳಕುಮಾರಿಯವರು ಈಗಾಗಲೇ ಇಲಾಖಾವತಿಯಿಂದ ಅನುಮತಿ ದೊರಕಿದ್ದು ೧೫ ಜನ ಮಕ್ಕಳನ್ನು ದಾಖಲಾತಿ ಮಾಡಲಾಗಿದ್ದು, ಶಿಕ್ಷಕರನ್ನು ಅರ್ಹತೆಯ ಮಾನದಂಡದ ಮೇಲೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಹೊನ್ನಪ್ಪ ಮಾತನಾಡಿ ಹಳೆ ವಿದ್ಯಾರ್ಥಿ ಸಂಘದ ಖಾತೆಯಲ್ಲಿರುವ ಹಣವನ್ನು ಆಂಗ್ಲ ಮಾಧ್ಯಮ ಶಾಲೆಗೆ ನೀಡಲು ಚರ್ಚಿಸಲಾಗುವುದು ಎಂದರು.

ಮಾಜಿ ಎಸ್.ಡಿ.ಎಂ.ಸಿ ಅಧ್ಯಕ್ಷ ಮುತ್ತಪ್ಪ ಮಾತನಾಡಿ, ದಾಖಲಾತಿಯಲ್ಲಿ ಮುನ್ನುಗ್ಗುತ್ತಿರುವ ಶಾಲೆಗೆ ಸಂಪೂರ್ಣ ಬೆಂಬಲವಿದೆ ಎಂದರು. ಸಿ.ಆರ್.ಪಿ. ಗಿರೀಶ್ ಮಾತನಾಡಿ, ಒಂದು ವರ್ಷದ ಮೊದಲೇ ಪ್ರಾರಂಭವಾಗಬೇಕಿದ್ದ ಎಲ್.ಕೆ.ಜಿ. ಶಿಕ್ಷಣ ಈಗ ಪ್ರಾರಂಭವಾಗಿದ್ದು, ಇಲಾಖಾ ವತಿಯಿಂದ ಸಹಕಾರ ನೀಡುವುದಾಗಿ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷ ವಿನೋದ್, ದಾನಿಗಳಾದ ಅಭಿರಾಮ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ್, ಕೆ.ಟಿ. ಮೇದಪ್ಪ, ಮುಖ್ಯ ಶಿಕ್ಷಕಿ ಸರಳ ಕುಮಾರಿ, ಶಿಕ್ಷಕರಾದ ಅಜಿತ್ ಕುಮಾರ್, ಶಿಕ್ಷಕಿಯರಾದ ಅನಸೂಯ, ಇಂದಿರಾ, ಭಾರತಿ, ವೇದಾವತಿ, ಅಕ್ಷಿತಾ, ಕಲಿಕಾ ಕೇಂದ್ರದ ಶಿಕ್ಷಕರು, ಎಲ್ಲಾ ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಪೋಷಕ ವರ್ಗದವರು ಹಾಜರಿದ್ದರು.

ಕಡಂಗ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಸೌಜನ್ಯ ಬಳಗ ಭೇಟಿ ನೀಡಿ ಕೊಡುಗೆ ನೀಡಿದರು.

ಅಧ್ಯಕ್ಷ ಸ್ಥಾನವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಫಾತಿಮಾ ಅವರು ವಹಿಸಿದ್ದರು. ಶಾಲಾ ಶೈಕ್ಷಣಿಕ ಚಟುವಟಿಕೆಯಲ್ಲಿ ಸಹಕರಿಸುತ್ತಿರುವ ಸೌಜನ್ಯ ಬಳಗ ಶಾಲೆಗೆ ಹಲವಾರು ಕೊಡುಗೆಗಳನ್ನು ನೀಡಿರುತ್ತಾರೆ.

ಸೌಜನ್ಯ ಟ್ರಸ್ಟ್ನ ಅಧ್ಯಕ್ಷರಾದ ರಂಗರಾಜ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಸಿಗುತ್ತಿರುವ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದರು.

ನರಿಯಂದಡ ಗ್ರಾಮ ಪಂಚಾಯಿತಿ ಸದಸ್ಯರಾದ ಸುಬೀರ್ ಮಾತನಾಡಿ, ಶಾಲಾ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸುತ್ತಿರುವ ಸೌಜನ್ಯ ಟ್ರಸ್ಟ್ನ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಸ್ಥಳೀಯ ದಾನಿಗಳು ಆದ ಉದಿಯಂಡ ಡಿ. ಚೆಂಗಪ್ಪ ಅವರು ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿರುವ ಉತ್ತಮ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು, ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಜರಿದ್ದರು. ನಿರೂಪಣೆಯನ್ನು ಕೆ.ಎಂ. ವಿಮಲಾರವರು ಮಾಡಿದರು. ಶಾಲಾ ಮುಖ್ಯಶಿಕ್ಷಕಿ ಪಿ.ಎ ಶಾಂತಿಕುಮಾರಿ ಸ್ವಾಗತಿಸಿ, ಶಾಲೆಗೆ ನೀಡಿದ ಕೊಡುಗೆಗಳ ಬಗ್ಗೆ ಬಬಿತ ಅವರು ವಿವರಿಸಿದರು. ವತ್ಸಲಾ ವಂದಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಪೊನ್ನಂಪೇಟೆ : ಆತ್ಮವಿಶ್ವಾಸವನ್ನ ಬೆಳೆಸಿಕೊಳ್ಳುವ ಮೂಲಕ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಬೇಕು ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಹಳ್ಳಿಗಟ್ಟು ಹುದೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ, ಸಿಐಟಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು ಬದುಕಿನಲ್ಲಿ ಸಮಸ್ಯೆಗಳು ಎದುರಾಗಿದೆ ಎಂದು ಆತ್ಮಹತ್ಯೆಗೆ ಶರಣಾಗುವುದು ಹೇಡಿತನದ ನಡೆಯಾಗಿದೆ. ಶಿಕ್ಷಣದ ಮೌಲ್ಯಗಳನ್ನು ಅರಿತು ಸಾಮಾಜಿಕ ಕಳಕಳಿಯೊಂದಿಗೆ, ಸಾಮಾಜಿಕ ಬಾಂಧವ್ಯ ಮತ್ತು ಮನುಜ ಪ್ರೀತಿಯೊಂದಿಗೆ ಬದುಕನ್ನು ನಡೆಸಿದಾಗ ಸಂಭ್ರಮ ಮತ್ತು ಉತ್ಸಾಹದಿಂದ ಕೂಡಿದ ಜೀವನ ನಡೆಸಲು ಸಾಧ್ಯವಾಗಬಲ್ಲದು ಎಂದು ಕಿವಿಮಾತು ಹೇಳಿದರು.

ಅರುವತ್ತೊಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಶರೀಫ ಬಿ.ವಿ. ಮಾತನಾಡಿ ಮಕ್ಕಳು ಶಿಕ್ಷಣವಂತ ರಾಗುವುದರ ಜೊತೆಗೆ ಈ ಸಮಾಜಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡುವ ಬಗ್ಗೆ ಗಮನಹರಿಸಬೇಕು, ಎಂದು ಹೇಳಿದರು.

ಸಿಐಟಿ ಕಾಲೇಜು ಕಾರ್ಯದರ್ಶಿ ರಾಕೇಶ್ ಪೂವಯ್ಯ ಮಾತನಾಡಿ, ಎನ್‌ಎಸ್‌ಎಸ್ ಶಿಬಿರದಿಂದ ವಿದ್ಯಾರ್ಥಿ ದೆಸೆಯಲ್ಲಿಯೇ ಶಿಸ್ತು ಮತ್ತು ಸಮಾಜದ ಮೌಲ್ಯವನ್ನು ಅರಿತುಕೊಳ್ಳಲು ಸಾಧ್ಯವಿದೆ. ಈ ಉದ್ದೇಶದೊಂದಿಗೆ ಶಿರಾರ್ಥಿಗಳು ತಮ್ಮನ್ನು ತಾವು ಸೇವಾ ಮನೋಭಾವದಿಂದ ಸಂಘಟನಾತ್ಮಕ ವಾಗಿ ತೊಡಗಿಸಿಕೊಂಡಾಗ ಈ ಸಮಾಜ ಕಟ್ಟುವ ಶಕ್ತಿಯಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಹೇಳಿದರು.

ಪ್ರಭಾರ ಪ್ರಾಂಶುಪಾಲ ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುದೂರು ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೈ.ಕಾವೇರಿ, ಎನ್.ಎಸ್.ಎಸ್ ಯೋಜನಾಧಿಕಾರಿ ಪವನ್‌ಕುಮಾರ್, ಶಿಬಿರಾರ್ಥಿಗಳು, ಶಾಲೆಯ ಶಿಕ್ಷಕರು ಇದ್ದರು.ಮಡಿಕೇರಿ: ಸುಸ್ಥಿರ ಅಭಿವೃದ್ಧಿಗೆ ಯುವ ಜನರ ಪಾತ್ರ ಪ್ರಮುಖವಾದುದು. ಆ ನಿಟ್ಟಿನಲ್ಲಿ ಯುವಜನರು ನಾಯಕತ್ವ ಗುಣ ಬೆಳೆಸಿಕೊಳ್ಳುವಂತಾಗಬೇಕು. ಇದರಿಂದ ಪರಿಣಾಮಕಾರಿ ವ್ಯಕ್ತಿತ್ವ ರೂಪಿಸಿಕೊಳ್ಳಬಹುದಾಗಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮೇ.ರಾಘವ ಅವರು ತಿಳಿಸಿದ್ದಾರೆ.

ಭಾರತ ಸರ್ಕಾರದ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎನ್‌ಎಸ್‌ಎಸ್ ಘಟಕ, ಜಿಲ್ಲಾ ಹಾಗೂ ತಾಲೂಕು ಯುವ ಒಕ್ಕೂಟ, ಮಡಿಕೇರಿ ಸ್ಪೂರ್ತಿ ಯುವ ಸಂಘ ಇವರ ಸಹಯೋಗದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ‘ಜಿಲ್ಲಾ ಮಟ್ಟದ ನೆರೆಹೊರೆಯ ಯುವ ಸಂಸತ್ತು’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಯುವ ಜನರು ಭವಿಷ್ಯದ ಪ್ರಜೆಗಳು, ಜೊತೆಗೆ ಸೈನಿಕರಂತೆ ರಾಷ್ಟçದ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ ಅವರು ಮಹಿಳಾ ಸಬಲೀಕರಣ ಕುರಿತು ಮಾತನಾಡಿ ರಾಜ್ಯ ಸರ್ಕಾರ ಶಕ್ತಿ, ಗೃಹಲಕ್ಷಿö್ಮ, ಕೇಂದ್ರ ಸರ್ಕಾರವು ನಾರಿಶಕ್ತಿ ಸ್ವ ಆಧಾರ್, ಒನ್ ಸ್ಟಾಪ್ ಸೆಂಟರ್ ಹೀಗೆ ಮಹಿಳೆಯರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿವೆ ಎಂದು ತಿಳಿಸಿದರು.

ಮಡಿಕೇರಿ: ಸುಸ್ಥಿರ ಅಭಿವೃದ್ಧಿಗೆ ಯುವ ಜನರ ಪಾತ್ರ ಪ್ರಮುಖವಾದುದು. ಆ ನಿಟ್ಟಿನಲ್ಲಿ ಯುವಜನರು ನಾಯಕತ್ವ ಗುಣ ಬೆಳೆಸಿಕೊಳ್ಳುವಂತಾಗಬೇಕು. ಇದರಿಂದ ಪರಿಣಾಮಕಾರಿ ವ್ಯಕ್ತಿತ್ವ ರೂಪಿಸಿಕೊಳ್ಳಬಹುದಾಗಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮೇ.ರಾಘವ ಅವರು ತಿಳಿಸಿದ್ದಾರೆ.

ಭಾರತ ಸರ್ಕಾರದ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎನ್‌ಎಸ್‌ಎಸ್ ಘಟಕ, ಜಿಲ್ಲಾ ಹಾಗೂ ತಾಲೂಕು ಯುವ ಒಕ್ಕೂಟ, ಮಡಿಕೇರಿ ಸ್ಪೂರ್ತಿ ಯುವ ಸಂಘ ಇವರ ಸಹಯೋಗದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ‘ಜಿಲ್ಲಾ ಮಟ್ಟದ ನೆರೆಹೊರೆಯ ಯುವ ಸಂಸತ್ತು’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಯುವ ಜನರು ಭವಿಷ್ಯದ ಪ್ರಜೆಗಳು, ಜೊತೆಗೆ ಸೈನಿಕರಂತೆ ರಾಷ್ಟçದ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ ಅವರು ಮಹಿಳಾ ಸಬಲೀಕರಣ ಕುರಿತು ಮಾತನಾಡಿ ರಾಜ್ಯ ಸರ್ಕಾರ ಶಕ್ತಿ, ಗೃಹಲಕ್ಷಿö್ಮ, ಕೇಂದ್ರ ಸರ್ಕಾರವು ನಾರಿಶಕ್ತಿ ಸ್ವ ಆಧಾರ್, ಒನ್ ಸ್ಟಾಪ್ ಸೆಂಟರ್ ಹೀಗೆ ಮಹಿಳೆಯರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿವೆ ಎಂದು ತಿಳಿಸಿದರು. ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಭ್ರೂಣಹತ್ಯೆ ನಿಷೇಧ, ಮಹಿಳಾ ಸಹಾಯವಾಣಿ. ಆಶ್ರಯ ಆಧಾರ, ಸುಕನ್ಯಾ ಸಮೃದ್ಧಿ, ನಾರಿಶಕ್ತಿ ಪುರಸ್ಕಾರ ಮತ್ತಿತರ ಜಾರಿಗೊಳಿಸಿದೆ ಎಂದರು. ಭಾರತ ಸಂವಿಧಾನವು ಮಹಿಳೆಯರಿಗೆ ಸಮಾನತೆ ಕಲ್ಪಿಸಿದೆ. ಸಮಾನ ಅವಕಾಶ ನೀಡಿದೆ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ಮಾತನಾಡಿ ರಾಷ್ಟçದಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಯುವಜನರು ರಾಷ್ಟçದಲ್ಲಿ ತಮ್ಮದೇ ಆದ ಪಾತ್ರ ವಹಿಸುತ್ತಾರೆ ಎಂದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಗಣಕಯಂತ್ರ ವಿಭಾಗದ ಉಪನ್ಯಾಸಕರಾದ ಡಿ.ಎಸ್.ಮಾನಸ ಅವರು ‘ನನ್ನ ಭಾರತ’ ವಿಷಯ ಕುರಿತು ಮಾತನಾಡಿದರು.

ಸಮಾಜದ ಒಂದು ಶಕ್ತಿ ಎಂದರೆ ಶಿಕ್ಷಣ ಪಡೆದ ಮಹಿಳೆ, ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುವ ಶಕ್ತಿಯನ್ನು ಹೊಂದಿದ್ದಾರೆ.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ ಅವರು ಮಾತನಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಎವರೆಸ್ಟ್ ರಾಡ್ರಿಗಸ್, ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಪಿ.ಪಿ.ಸುಕುಮಾರ್, ತಾಲ್ಲೂಕು ಯುವ ಘಟಕದ ಅಧ್ಯಕ್ಷರಾದ ಬಾಳಾಡಿ ದಿಲೀಪ್ ಕುಮಾರ್, ಇತರರು ಇದ್ದರು. ತ್ರಿವೇಣಿ ಹಾಗೂ ದೀಪ್ತಿ ಅವರು ಪ್ರಾರ್ಥಿಸಿದರು. ರಿಷಿತಾ ಸ್ವಾಗತ ನೃತ್ಯ ಮಾಡಿದರು. ವೀರಾಜಪೇಟೆ: ಮೈಸೂರು ವಿಶ್ವವಿದ್ಯಾಲಯದ ಎಂ.ಪಿ.ಎಡ್ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದು ಸಾಧನೆ ಮಾಡಿದ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಶಬರೀಶ್ ವಿ.ಆರ್. ಅವರನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ಐಸಾಕ್ ರತ್ನಾಕರ್ ಇವರನ್ನು ಸನ್ಮಾನಿಸಿ, ಮಾತನಾಡಿ, ವಿದ್ಯಾಸಂಸ್ಥೆಯ ಪ್ರೌಢಶಾಲಾ ದೈಹಿಕ ಶಿಕ್ಷಕರಾದ ಶಬರೀಶ್ ಶೈಕ್ಷಣಿಕವಾಗಿ ಈ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ. ಅವರ ಕ್ರಿಯಾಶೀಲತೆ, ಶಿಸ್ತು, ಮತ್ತು ಕಾರ್ಯ ವೈಖರಿ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯರಾದ ಸಿಸ್ಟರ್ ರೋಸಿ, ಸಿಸ್ಟರ್ ಐಡಾ ಉಪಸ್ಥಿತರಿದ್ದರು.

ಚೆಯ್ಯಂಡಾಣೆ: ವೀರಾಜಪೇಟೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಪೋಷಕರ ಸಭೆ ಹಾಗೂ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ವೀರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ಮೊಹಮ್ಮದ್ ರಾಫಿ ಸರ್ಕಾರದ ಉತ್ತಮ ಯೋಜನೆಗಳನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು. ಪೋಷಕರು ಹೆಣ್ಣು ಮಕ್ಕಳನ್ನು ಬೇಗನೆ ವಿವಾಹ ಮಾಡದೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರಲು ಸಹಕರಿಸಬೇಕೆಂದು ಕಿವಿಮಾತು ಹೇಳಿದರು.

ಗೋಣಿಕೊಪ್ಪ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕರಾದ ನಿರ್ಮಲ ಬಿ.ಎಂ ಹಾಗೂ ನಿಲಯದ ಗೌರವ ಶಿಕ್ಷಕರಾದ ತ್ರಿವೇಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಕಿರುಕಾಣಿಕೆ ನೀಡಲಾಯಿತು. ವಾರ್ಡನ್ ಸುಮಯ್ಯ ಸ್ವಾಗತಿಸಿ ವಿದ್ಯಾರ್ಥಿನಿ ನಿಶಾ ವಂದಿಸಿದರು.ಮಡಿಕೇರಿ: ಹೊಸೂರು ಬೆಟ್ಟಕೇರಿ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಗೊಂಡ ಶಿಕ್ಷಕ ಬಿ.ಸಿ. ಬಾಲಕೃಷ್ಣ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಸವಿತ, ಬಿ.ಆರ್.ಸಿ ವನಜಾಕ್ಷಿ, ಬಿ.ಆರ್.ಪಿ ಪುಷ್ಪ, ಸಿ.ಆರ್.ಪಿ ಕರುಂಬಯ್ಯ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಎಂ.ಡಿ ಶ್ರೀನಿವಾಸ್, ಮೊಳ್ಳೇರ ಸದಾ ಅಪ್ಪಚ್ಚು, ಹೊಸೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮೇದಪ್ಪ, ಶಾಲೆಯ ಸಹ ಶಿಕ್ಷಕರಾದ ರೋಸ್ಲಿ, ಲಕ್ಷಿö್ಮ, ದಿವ್ಯಾ, ಅಂಗನವಾಡಿ ಶಿಕ್ಷಕಿ ಲಕ್ಷಿö್ಮ ಹಾಜರಿದ್ದರು.