ಮಡಿಕೇರಿ, ಮಾ. ೧೬: ಲೋಕಸಭಾ ಚುನಾವಣೆ ದಿನಾಂಕ ನಿಗದಿಯಾಗಿದ್ದು, ವ್ಯವಸ್ಥಿತವಾಗಿ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಲು ಸಾರ್ವಜನಿಕರ ಸಹಕಾರವೂ ಅತಿಮುಖ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಾ. ೧೬ ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ೧,೧೫,೧೫೯ ಪುರುಷ, ೧,೨೧,೩೯೪ ಮಹಿಳಾ, ಇತರ ೯ ಸೇರಿ ಒಟ್ಟ ೨,೩೬,೫೬೨ ಮತದಾರರು, ವೀರಾಜಪೇಟೆ
(ಮೊದಲ ಪುಟದಿಂದ) ಕ್ಷೇತ್ರದಲ್ಲಿ ೧,೧೩,೩೧೯ ಪುರುಷ, ೧,೧೬,೨೬೬ ಮಹಿಳಾ, ೭ ಇತರೆ ಸೇರಿ ೨,೨೯,೫೯೨ ಮತದಾರರಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ೩,೬೬,೧೫೪ ಸಾಮಾನ್ಯ ಮತದಾರರಿದ್ದಾರೆ. ಇದರೊಂದಿಗೆ ೧,೩೫೭ ಸೇವಾ ಮತದಾರರು, ೪,೪೧೧ ವಿಶೇಷಚೇತನ, ೫,೬೮೬ರಷ್ಟು ೮೫ ವರ್ಷ ಮೇಲ್ಪಟ್ಟ, ೯,೦೭೬ ಯುವ ಮತದಾರರಿದ್ದಾರೆ ಎಂದು ವಿವರಿಸಿದರು.
೫೪೬ ಮತಗಟ್ಟೆಗಳು
ಜಿಲ್ಲೆಯಲ್ಲಿ ಒಟ್ಟು ೫೪೬ ಮತಗಟ್ಟೆಗಳನ್ನು ಗುರುತಿಸಿದ್ದು, ಈ ಪೈಕಿ ೨ ಕ್ಷೇತ್ರಗಳಲ್ಲಿ ತಲಾ ೨೭೩ ಮತಗಟ್ಟೆಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಮತಗಟ್ಟೆಗಳಿಗೆ ಅಗತ್ಯ ಕನಿಷ್ಟ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ, ರ್ಯಾಂಪ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಮತಗಟ್ಟೆಗಳಿಗೆ ಒಬ್ಬರು ಅಧ್ಯಕ್ಷಾಧಿಕಾರಿ ಮತ್ತು ೩ ಮತಗಟ್ಟೆ ಅಧಿಕಾರಿಗಳನ್ನು ಹಾಗೂ ಮೀಸಲು ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು. ಅದೇ ರೀತಿ ಕೇಂದ್ರ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳನ್ನು ಆಯ್ದ ಮತಗಟ್ಟೆಗಳಿಗೆ ಮೈಕ್ರೋ ವೀಕ್ಷಕರನ್ನಾಗಿ ನೇಮಕ ಮಾಡಲು ಕ್ರಮ ವಹಿಸಲಾಗಿದೆ ಎಂದರು.
ಅಂಚೆ ಮತಕ್ಕೆ ಅವಕಾಶ
೮೫ ವರ್ಷ ಮೇಲ್ಟಟ್ಟ ಹಿರಿಯ ನಾಗರಿಕರಿಗೆ, ವಿಶೇಷಚೇತನ, ಕೋವಿಡ್ ಶಂಕಿತ, ದೃಡಪಟ್ಟ ಮತದಾರರಿಗೆ ಹಾಗೂ ಅಗತ್ಯ ಸೇವೆಗಳ ಇಲಾಖೆಗಳ ನಿರತ ಅಧಿಕಾರಿ, ಸಿಬ್ಬಂದಿಗಳಿಗೆ ವಿಶೇಷವಾಗಿ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಅಂಚೆ ಮತಪತ್ರಕ್ಕೆ ನಮೂನೆ ೧೨ ಡಿ ರಲ್ಲಿ ಈ ದಿನದಿಂದ ನಾಮಪತ್ರಕ್ಕೆ ಸಲ್ಲಿಸಲು ಪ್ರಾರಂಭವಾದ ದಿನಾಂಕದಿAದ ೫ ದಿನದೊಳಗಾಗಿ ಸಂಬAಧಪಟ್ಟ ಸಹಾಯಕ ಚುನಾವಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ.
ಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಉಪವಿಭಾಗಧಿಕಾರಿ ವಿನಾಯಕ್ ನರ್ವಡೆ ಹಾಜರಿದ್ದರು.