ಮೆಹರೋಜ್ ಖಾನ್
ಕುಶಾಲನಗರ, ಮಾ. ೧೫: ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಶೇ. ೯೦ ರಷ್ಟು ಜನರಿಗೆ ತಲುಪುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೋಜ್ ಖಾನ್ ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾಗಿ ಪ್ರಥಮ ಬಾರಿಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಮೆಹರೋಜ್ ಖಾನ್ ಅವರಿಗೆ ಕುಶಾಲನಗರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತಿಸಲಾಯಿತು.
ಈ ಸಂದರ್ಭ ಮಾತನಾಡಿದ ಅವರು, ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆಯುವ ಪಕ್ಷ ಎಂದು ಸಾಬೀತುಪಡಿಸಿದೆ. ಇದರ ಉಪಯೋಗವನ್ನು ರಾಜ್ಯದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು ಪಡೆಯುತ್ತಿದ್ದಾರೆ ಎಂದರು.
ಕೆಪಿಸಿಸಿ ಸದಸ್ಯ ನಟೇಶ್ ಗೌಡ, ಯಾಕೂಬ್, ಜಿಲ್ಲಾ ಅಲ್ಪ ಸಂಖ್ಯಾತರ ಘಟಕದ ಪ್ರಮುಖ ರಾದ ಹನೀಫ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭಾ ಸದಸ್ಯ ಶೇಕ್ ಕಲಿಮುಲ್ಲಾ, ಕಾರ್ಮಿಕ ಘಟಕದ ಶಿವಶಂಕರ್, ಪ್ರಮುಖರಾದ ರಜಾಕ್, ಅಬ್ದುಲ್ ಲತೀಫ್, ಕೈಸರ್ ಪೋರ್ ಶೆರ ಮತ್ತಿತರರು ಇದ್ದರು.