ಮಡಿಕೇರಿ, ಮಾ. ೧೬: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿಯ ಮುಕ್ತ ಕಥಾ ಸ್ಪರ್ಧೆಯಲ್ಲಿ ಜಿಲ್ಲೆಯ ೨೩ ಕಥೆಗಾರರು ಭಾಗವಹಿಸಿದ್ದು ಪ್ರಥಮ ಸ್ಥಾನವನ್ನು ಕುಶಾಲನಗರದ ಶ್ರೀಮತಿ ಕುಕ್ಕನೂರು ರೇಷ್ಮಾ ಮನೋಜ್, ದ್ವಿತೀಯ ಸ್ಥಾನವನ್ನು ನಾಪೋಕ್ಲಿನ ಮಧುಸೂಧನ್ ಬಿಳಿಗುಲಿ ಮತ್ತು ತೃತಿಯ ಸ್ಥಾನವನ್ನು ಮೂರ್ನಾಡಿನ ಕಿಗ್ಗಾಲು ಗಿರೀಶ್ ಪಡೆದುಕೊಂಡಿದ್ದಾರೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಶಕ್ತಿ ಪತ್ರಿಕೆಯ ಸಂಸ್ಥಾಪಕರಾದ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿನಿಧಿ ಕಾರ್ಯಕ್ರಮ ಹಾಗೂ ಮುಕ್ತ ಕಥಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಬಾಳೆಲೆಯ ವಿಜಯಲಕ್ಷಿö್ಮ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ತಾ. ೧೯ರಂದು ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಭು ವಹಿಸಲಿದ್ದು ಉದ್ಘಾಟನೆಯನ್ನು ಬಾಳೆಲೆ ಸೆಂಟರ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ನೆರವೇರಿಸಲಿದ್ದಾರೆ. ಪ್ರಾಸ್ತಾವಿಕವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡಲಿದ್ದಾರೆ.

ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷÀ ಕೋಳೆರ ದಯಾ ಚಂಗಪ್ಪ ಹಾಗೂ ದತ್ತಿದಾನಿಗಳಾದ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕರು ಹಾಗೂ ಕೊಡಗು ಜಾನಪದ ಪರಿಷತ್ತಿನ ಅಧ್ಯಕ್ಷರೂ ಆದ ಬಿ.ಜಿ. ಅನಂತಶಯನ ಉಪಸ್ಥಿತರಿರುತ್ತಾರೆ. ಕಥಾ ರಚನಾ ಕೌಶಲ್ಯ ಕುರಿತು ಉಪನ್ಯಾಸವನ್ನು ವೀರಾಜಪೇಟೆಯ ಪತ್ರಕರ್ತೆ ಉಷಾ ಪ್ರೀತಂ ನೀಡಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ ನೀಡಲಾಗುತ್ತದೆ.

ಮುಖ್ಯ ಅತಿಥಿಗಳಾಗಿ ಬಾಳೆಲೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮತ್ತು ಬಾಳೆಲೆ ಸೆಂಟರ್ ಎಜುಕೇಶನ್ ಸೊಸೈಟಿಯ ಗೌರವ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀಮತಿ ಮುಕ್ಕಾಟಿರ ಜಾನಕಿ ಕಾವೇರಪ್ಪ, ಬಾಳೆಲೆಯ ವಿಜಯಲಕ್ಷಿö್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯನ್.ಕೆ.ಪ್ರಭು, ಬಾಳೆಲೆಯ ವಿಜಯಲಕ್ಷಿö್ಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಚಂದ್ರಶೇಖರ್ ಭಾಗವಹಿಸಲಿದ್ದಾರೆ ಎಂದು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಕೆ.ವಿ. ರಾಮಕೃಷ್ಣ ಮತ್ತು ಶೀಲಾ ಬೋಪಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.