ಕುಶಾಲನಗರ, ಮಾ.೧೫: ಕುಶಾಲನಗರ ತಾಲೂಕು ಹೆಬ್ಬಾಲೆ ಗ್ರಾಮದ ಬಾಣಾವರ ರಸ್ತೆಯಲ್ಲಿರುವ ಭೈರಪ್ಪನ ಗುಡಿ ವ್ಯಾಪ್ತಿಯಲ್ಲಿ ಖಾಸಗಿ ಜಮೀನಿನಲ್ಲಿ ಬೆಳೆದು ನಿಂತಿದ್ದ ಹಲವು ಶ್ರೀಗಂಧದ ಮರಗಳನ್ನು ಬೆಂಕಿ ಹಾಕಿ ನಾಶಗೊಳಿಸಿರುವ ದೃಶ್ಯ ಕಂಡು ಬಂದಿದೆ.
ನಿಡ್ತ ಮೀಸಲು ಅರಣ್ಯಕ್ಕೆ ಒತ್ತಿನಲ್ಲಿರುವ ರಸ್ತೆ ಬದಿಯ ಬೇಲಿ ಹಾಕಿರುವ ಖಾಸಗಿ ಜಮೀನು ಒಂದರಲ್ಲಿ ಬೆಂಕಿ ಹಾಕಿದ್ದು ಶ್ರೀಗಂಧದ ಮರಗಳು ಬೆಂಕಿಗೆ ಆಹುತಿಯಾಗಿವೆ. ರಸ್ತೆ ಬದಿಯಲ್ಲಿ ಈ ಘಟನೆ ನಡೆದರೂ ಅರಣ್ಯ ಇಲಾಖೆ ಅಧಿಕಾರಿಗಳು ಮರಗಳನ್ನು ಸಂರಕ್ಷಣೆ ಮಾಡುವಲ್ಲಿ ಸಂಪೂರ್ಣ ನಿರ್ಲಕ್ಷö್ಯ ತಾಳಿರುವುದು ಕಂಡು ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ದಾರಿ ಉದ್ದಕ್ಕೂ ಅರಣ್ಯದ ಅಂಚಿನ ಪ್ರದೇಶಕ್ಕೆ ಬೆಂಕಿ ಹಾಕಿದ್ದು ಈ ವ್ಯಾಪ್ತಿಯಲ್ಲಿ ಕೂಡ ಹಲವು ಗಂಧದ ಮರಗಳು ಬೆಂಕಿಗೆ ಆಹುತಿಯಾಗಿವೆ.
ಸಂಪರ್ಕಿಸಿದಾಗ ಈಗ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ತಕ್ಷಣ ವಲಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳ ಪರಿಶೀಲನೆ ಮಾಡುವಂತೆ ಸೂಚನೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಚೇತನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.
-ಚಂದ್ರಮೋಹನ್