ಪೊನ್ನಂಪೇಟೆ, ಮಾ. ೧೭: ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ರಕ್ತ ನಿಧಿ ಕೇಂದ್ರ, ಜಿಲ್ಲಾಸ್ಪತ್ರೆ ಮಡಿಕೇರಿ ಇವರ ಸಂಯುಕ್ತಾಶ್ರಯದಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್ ದೀಪಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಮಡಿಕೇರಿ ವೈದ್ಯಕೀಯ ಕಾಲೇಜು ಪ್ರಾಧ್ಯಾಪಕ ಹಾಗೂ ಮಡಿಕೇರಿ ರಕ್ತ ನಿಧಿ ಕೇಂದ್ರದ ಅಧಿಕಾರಿ ಡಾ.ಕೆ.ಪಿ. ಕರುಂಬಯ್ಯ, ಗ್ರಾಮ ಪಂಚಾಯಿತಿಯೊAದು ರಕ್ತದಾನ ಶಿಬಿರವನ್ನು ಪ್ರಥಮ ಬಾರಿಗೆ ಆಯೋಜಿಸುವ ಮೂಲಕ ಜಿಲ್ಲೆಗೆ ಮಾದರಿಯಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಯುವ ಜನತೆ ರಕ್ತದಾನ ದಾನ ಮಾಡುವ ಸಂಕಲ್ಪ ಮಾಡಿ, ಅರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ಕೈ ಜೋಡಿಸಬೇಕು ಎಂದರು.
ಶಿಬಿರದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು ಸೇರಿದಂತೆ ಒಟ್ಟು ೩೭ ಮಂದಿ ರಕ್ತದಾನ ಮಾಡಿದರು.
ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ಆಲೀರ ಎಂ. ರಶೀದ್, ಸದಸ್ಯರಾದ ಮೂಕಳೇರ ಮಧುಕುಮಾರ್, ಕರ್ತಮಾಡ ರಸಿಕ, ಜುನೈದ್ ಸಿ.ಎ, ಕೋಳೆರ ಭಾರತಿ, ಅಮ್ಮತ್ತಿರ ಆರತಿ ಸುರೇಶ್, ವಿಜಯಕುಮಾರ್, ರಾಮಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು ಆರ್.ಜೆ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಶ್, ಜೈ ಜವಾನ್ ಡಿಫೆನ್ಸ್ ಅಕಾಡೆಮಿಯ ಲವಿನ್ ಮಾದಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸಾಜಿ ಅಚ್ಯುತ್ತನ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು. ಗ್ರಾಮ ಪಂಚಾಯಿತಿ ವತಿಯಿಂದ ರಕ್ತದಾನಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.