ಸುAಟಿಕೊಪ್ಪ, ಮಾ. ೧೭: ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ರೆಸಾರ್ಟ್ವೊಂದರ ಕಾಂಪೌAಡ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಸುಂಟಿಕೊಪ್ಪ ಸಮೀಪದ ಹೇರೂರು ಜಂಗಲ್ ರೆಸಾರ್ಟ್ ಬಳಿ ಘಟನೆ ಸಂಭವಿಸಿದೆ. ಸುಂಟಿಕೊಪ್ಪ ಸಮೀಪದ ಗ್ರಾಮವೊಂದರ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಆಲ್ಟೋ ಕಾರು ಅನ್ನು ಬಾಡಿಗೆಗೆ ಪಡೆದುಕೊಂಡು ತನ್ನ ನಾಲ್ಕು ಸ್ನೇಹಿತರೊಡನೆ ಕಾರನ್ನು ಚಲಾಯಿಸಿಕೊಂಡು ಬಸವನಹಳ್ಳಿ ಮಾರ್ಗವಾಗಿ ಬರುವಾಗ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆಯ ಇನ್ನೊಂದು ಬದಿಯಲ್ಲಿರುವ ರೆಸಾರ್ಟ್ನ ವಾಹನ ಪಾರ್ಕಿಂಗ್ ಮಾಡುವ ಸ್ಥಳದಲ್ಲಿನ ಕಾಂಪೌAಡ್ಗೆ ಅಪ್ಪಳಿಸಿ ರಸ್ತೆಯಲ್ಲಿ ಮೂರು ಪಲ್ಟಿ ಹೊಡೆದಿದೆ. ಈ ಸಂದರ್ಭ ಕರ್ತವ್ಯ ನಿರತರಾಗಿದ್ದ ಇಬ್ಬರು ಮಹಿಳಾ ಸಿಬ್ಬಂದಿಗಳಿಗೆ ಕಾರು ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡು ಚಿಂತಾಜನಕರಾಗಿರುವ ಇವರನ್ನು ಮೈಸೂರು ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.