ಕೇಜ್ರಿವಾಲ್ಗೆ ಇ.ಡಿ.ಯಿಂದ ಮತ್ತೊಂದು ಸಮನ್ಸ್
ನವದೆಹಲಿ, ಮಾ. ೧೭: ಅಬಕಾರಿ ನೀತಿ ಹಗರಣಕ್ಕೆ ಸಂಬAಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ ೨೧ ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟಿçÃಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರನ್ನು ಕೇಂದ್ರ ದೆಹಲಿಯಲ್ಲಿರುವ ಕೇಂದ್ರೀಯ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೇಳಲಾಗಿದೆ. ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಜಾರಿ ಮಾಡಿರುವ ಒಂಬತ್ತನೇ ಸಮನ್ಸ್ ಇದಾಗಿದ್ದು, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬAಧಿಸಿದAತೆ ಇ.ಡಿ ಜಾರಿ ಮಾಡಿದ್ದ ಸಮನ್ಸ್ಗಳನ್ನು ಕಾನೂನುಬಾಹಿರ ಎಂದು ಕರೆದಿದ್ದ ಕೇಜ್ರಿವಾಲ್ ಅವರು, ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇ.ಡಿ ೮ ಬಾರಿ ಸಮನ್ಸ್ ನೀಡಿದ್ದರೂ, ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಕೇಜ್ರಿವಾಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಇ.ಡಿ ಸಲ್ಲಿಸಿದ ಎರಡು ದೂರುಗಳ ಮೇಲೆ ದೆಹಲಿ ನ್ಯಾಯಾಲಯ ಶನಿವಾರ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರನ್ನು ಎರಡು ದಿನಗಳ ಹಿಂದಷ್ಟೇ ಸಂಸ್ಥೆ ಬಂಧಿಸಿತ್ತು.
ಮೋದಿ ಕಾರ್ಯಕ್ರಮಕ್ಕೆ ಹೋಗಲಾರೆ - ಈಶ್ವರಪ್ಪ
ಶಿವಮೊಗ್ಗ, ಮಾ. ೧೭: ಪ್ರಧಾನಿ ನರೇಂದ್ರ ಮೋದಿ ಮಾ.೧೮ಕ್ಕೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಆದರೆ, ಕಾರ್ಯಕ್ರಮದ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಪ್ರಧಾನಿ ಮೋದಿ ನನ್ನ ದೇವರು. ಪ್ರಾಣ ಹೋದರೂ ಅವರ ಹೆಸರು ಹೇಳುವುದನ್ನು ಬಿಡುವುದಿಲ್ಲ. ಆದರೆ, ಏಕ ಕುಟುಂಬದ ಕಪಿಮುಷ್ಠಿಯಿಂದ ಪಕ್ಷವನ್ನು ಬಿಡುಗಡೆ ಮಾಡಬೇಕು ಎನ್ನುವ ಉದ್ದೇಶದಿಂದ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಗೆದ್ದ ಬಳಿಕ ಮೋದಿ ಬಳಿ ಹೋಗುವೆ. ಕಾರ್ಯಕ್ರಮಕ್ಕೆ ತೆರಳದಿರುವ ಕುರಿತು ದುಃಖವಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಸಂಧಾನಕ್ಕಾಗಿ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಕಳುಹಿಸಿದ್ದರು. ನಾನು ಅವರ ಸಂಧಾನಕ್ಕೆ ಒಪ್ಪಿಲ್ಲ. ನನ್ನ ಪುತ್ರನಿಗೆ ಟಿಕೆಟ್ ತಪ್ಪಿಸಿದ್ದು ಮಾತ್ರವಲ್ಲ, ನನಗೆ ಯಡಿಯೂರಪ್ಪ ಕುಟುಂಬದವರು ಮೋಸ ಮಾಡಿದ್ದಾರೆ' ಎಂದು ದೂರಿದರು. ಬಿಜೆಪಿ ಹೈಕಮಾಂಡ್ ಪರವಾಗಿ ಈಶ್ವರಪ್ಪ ನಿವಾಸಕ್ಕೆ ಪಕ್ಷದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಮೋಹನ ಅಗರವಾಲ್ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಒಳಗೊಂಡ ಪಕ್ಷದ ನಿಯೋಗ ಭಾನುವಾರ ಭೇಟಿ ನೀಡಿತು. ಮಧ್ಯಾಹ್ನ ೧೨ಗಂಟೆಗೆ ಆಗಮಿಸಿ ಈಶ್ವರಪ್ಪ ಅವರ ಮನವೊಲಿಸಲು ಸಭೆ ನಡೆಸಲಾಯಿತು. ಆದರೆ, ಇದಕ್ಕೆ ಜಗ್ಗದ ಈಶ್ವರಪ್ಪ, ಸಭೆಯ ಮಧ್ಯದಲ್ಲಿಯೇ ಬೇರೆ ಕಾರ್ಯಕ್ರಮದ ನಿಮಿತ್ತ ಎದ್ದು ತೆರಳಿದರು. ಬಳಿಕ ೧.೩೦ ರವರೆಗೆ ಕಾದು ಕುಳಿತ ಕೇಂದ್ರ ನಾಯಕರ ನಿಯೋಗ ಹೊರ ನಡೆಯಿತು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಮೋಹನ ಅಗರವಾಲ್ ಅವರು, ಕಳೆದ ಒಂದು ತಿಂಗಳಿನಿAದ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವೆ. ಅದೇ ರೀತಿ ಈಶ್ವರಪ್ಪ ಅವರಿಗೆ ಚುನಾವಣೆಯಿಂದ ಹಿಂದೆ ಸರಿಯುವಂತೆ ಅವರ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿರುವೆ. ಕಾದು ನೋಡಬೇಕಿದೆ ಎಂದು ತಿಳಿಸಿದರು.
ಸಂವಿಧಾನ ಬದಲಿಸುವ ಧೈರ್ಯ ಬಿಜೆಪಿಗಿಲ್ಲ - ರಾಹುಲ್
ಮುಂಬೈ, ಮಾ. ೧೭: ಬಿಜೆಪಿಯವರು ಜಾಸ್ತಿ ಕಿರುಚಾಡುತ್ತಾರೆ. ಆದರೆ ಸಂವಿಧಾನ ಬದಲಾಯಿಸುವಷ್ಟು ಧೈರ್ಯ ಅವರಿಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮುಂಬೈಯ ಮಹಾತ್ಮಗಾಂಧಿ ಅವರ ನಿವಾಸ ಮಣಿ ಭವನದಿಂದ, ೧೯೪೨ರಲ್ಲಿ ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭವಾದ ಆಗಸ್ಟ್ ಕ್ರಾಂತಿ ಮೈದಾನಕ್ಕೆ 'ನ್ಯಾಯ ಸಂಕಲ್ಪ ಪಾದಯಾತ್ರೆ' ಕೈಗೊಂಡರು. ಈ ವೇಳೆ ಮಾತನಾಡಿದ ಅವರು ಬಿಜೆಪಿಯವರು ಕಿರುಚಾಡುತ್ತಾರೆ. ಆದರೆ ಸಂವಿಧಾನ ಬದಲಾಯಿಸುವಷ್ಟು ಧೈರ್ಯವಿಲ್ಲ. ಸತ್ಯ ಮತ್ತು ಜನಬೆಂಬಲ ನಮ್ಮೊಂದಿಗೆ ಇದೆ ಎಂದು ಹೇಳಿದರು.
೭ನೇ ವೇತನ ಆಯೋಗದ ಶಿಫಾರಸು
ಬೆಂಗಳೂರು, ಮಾ. ೧೭: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗವು ಶೇಕಡ ೩೧ರಷ್ಟು ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜೊತೆಗೆ, ಶೇ ೨೭.೫೦ರಷ್ಟು ಫಿಟ್ಮೆಂಟ್ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆಯೋಗದ ಅಧ್ಯಕ್ಷರಾದ ನಿವೃತ್ತ ಮುಖ್ಯಕಾರ್ಯದರ್ಶಿ ಕೆ. ಸುಧಾಕರ್ ರಾವ್ ನೇತೃತ್ವದ ಆಯೋಗದ ಸದಸ್ಯರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿ ಮಾಡಿ ೨೪೪ ಪುಟಗಳ ವರದಿಯನ್ನು ಸಲ್ಲಿಸಿದರು. ಆರಂಭಿಕ ವೃಂದದ ನೌಕರರ ಕನಿಷ್ಟ ವೇತನ ತಿಂಗಳಿಗೆ ರೂ. ೧೭ ಸಾವಿರ ಇದ್ದು, ಅದನ್ನು ಗರಿಷ್ಟ ರೂ. ೨೭ ಸಾವಿರಕ್ಕೆ ಹಾಗೂ ಹಿರಿಯ ಶ್ರೇಣಿ ನೌಕರರ ಆರಂಭಿಕ ಕನಿಷ್ಟ ವೇತನ ಈಗ ರೂ. ೧,೦೪,೬೦೦ ಇದ್ದು, ಅದನ್ನು ರೂ. ೧,೬೭,೨೦೦ಕ್ಕೆ ಪರಿಷ್ಕರಿಸುವಂತೆ ಶಿಫಾರಸು ಮಾಡಲಾಗಿದೆ. ಪ್ರಸ್ತುತ ೧:೮.೮೬ ಕನಿಷ್ಟ ಮತ್ತು ಗರಿಷ್ಠ ವೇತನಗಳ ಅನುಪಾತವನ್ನು ೧:೮.೯೩ಕ್ಕೆ ಹೆಚ್ಚಿಸಲಾಗಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳ ಬೋಧಕೇತರ ನೌಕರರಿಗೂ ಈ ಶಿಫಾರಸು ಅನ್ವಯವಾಗಲಿದ್ದು, ೨೦೨೨ರ ಜೂನ್ನಿಂದ ಪೂರ್ವಾನ್ವಯವಾಗುವಂತೆ ಜಾರಿ ಮಾಡುವಂತೆ ಶಿಫಾರಸು ಮಾಡಿದೆ.
ಬಿಜೆಪಿಗೆ ಬೆಂಬಲ ಘೋಷಿಸಿದ ಎನ್ಪಿಪಿ
ಗುವಾಹಟಿ, ಮಾ. ೧೭: ಅರುಣಾಚಲ ಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಯಾವುದೇ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ. ಜೊತೆಗೆ, ಈ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಾಗುವುದು ಎಂದು ಮೇಘಾಲಯ ಮುಖ್ಯಮಂತ್ರಿ ಕೋನ್ನಡ್ ಸಂಗ್ಯಾ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಷನಲ್ ಪೀಪಲ್ಸ್ ಪಾರ್ಟಿಯು (ಎನ್ಪಿಪಿ) ಕೇಂದ್ರ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಭಾಗವಾಗಿದೆ ಎಂದು ಹೇಳಿದ್ದಾರೆ. ಅರುಣಾಚಲ ಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸದಿರಲು ನ್ಯಾಷನಲ್ ಪೀಪಲ್ಸ್ ಪಾರ್ಟಿ ನಿರ್ಧರಿಸಿದೆ. ಎನ್ಡಿಎ ಪಾಲುದಾರರಾಗಿರುವ ಎನ್ಪಿಪಿಯು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಸಂಸ್ಮಾ ‘ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬಿ.ಆರ್.ಎಸ್. ತೊರೆದ ಹಾಲಿ ಶಾಸಕ, ಸಂಸದ
ಹೈದರಾಬಾದ್, ಮಾ. ೧೭: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಭಾರತ ರಾಷ್ಟç ಸಮಿತಿ (ಬಿಆರ್ಎಸ್) ಪಕ್ಷಕ್ಕೆ ಆಘಾತ ನೀಡಿರುವ ಹಾಲಿ ಶಾಸಕ, ಸಂಸದ, ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಚೆವೆಳ್ಳ ಕ್ಷೇತ್ರದ ಸಂಸದ ರಂಜಿತ್ ರೆಡ್ಡಿ ಮತ್ತು ಖೈರತಾಬಾದ್ನ ಶಾಸಕ ಡಿ ನಾಗೇಂದ್ರ ಇಂದು ಪಕ್ಷ ತೊರೆದಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ವಾರಂಗಲ್ ಕ್ಷೇತ್ರದ ಸಂಸದ ಪಸುನೂರಿ ದಯಾಕರ್ ಶನಿವಾರ ಕಾಂಗ್ರೆಸ್ ಸೇರಿದ್ದರು. ಈ ಹಿಂದೆ ಬಿಆರ್ಎಸ್ ಪಕ್ಷದ ಜಹೀರಾಬಾದ್ ಮತ್ತು ನಾಗರ್ ಕರ್ನೂಲ್ನ ಸಂಸದರಾದ ಬಿ.ವಿ. ಪಾಟೀಲ್ ಮತ್ತು ಬಿ. ರಾಮುಲು ಬಿಜೆಪಿ ಸೇರಿದ್ದರು.