ಮಡಿಕೇರಿ, ಮಾ. ೧೭: ಪ್ರಜಾಪ್ರಭುತ್ವದ ರಕ್ಷಣೆಯಾಗಬೇಕಾದರೆ ಮತದಾನ ಅಗತ್ಯವಿದ್ದು, ಸಂವಿಧಾನ ಆಶಯಗಳಿಗೆ ಎಲ್ಲರೂ ಬೆಲೆ ನೀಡಬೇಕೆಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕರೆ ನೀಡಿದರು.
ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮತದಾನದ ಮಹತ್ವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಭಿಯಾನ ಹಾಗೂ ಸಮಾಜ ಕಲ್ಯಾಣ ಇಲಾಖಾ ನೌಕರರ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ. ನಿತ್ಯ ಒತ್ತಡದಲ್ಲಿ ಸರಕಾರಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ. ಸರಕಾರದ ಸಂವಿಧಾನ ಜಾಗೃತಿ ಜಾಥಾದಲ್ಲಿನ ಅಭೂತಪೂರ್ವ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಗಳ ಶ್ರಮ ಅಪಾರವಾಗಿದೆ. ಸಮಾಜದ ಕೆಲಸ ಎಂದು ಸದುದ್ದೇಶಕ್ಕಾಗಿ ಶ್ರಮಿಸಿರು ವುದು ಶ್ಲಾಘನೀಯ. ಕೊಡಗು ಮಾದರಿ ಜಿಲ್ಲೆಯಾಗಬೇಕೆಂದರೆ ಸರಕಾರಿ ಅಧಿಕಾರಿಗಳ ಸಹಕಾರ ಅಗತ್ಯ ಎಂದು ವೆಂಕಟ್ ರಾಜಾ ತಿಳಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಸ್ವೀಪ್ ಕಾರ್ಯಕ್ರಮದಡಿ ಕ್ರೀಡಾಕೂಟ ಆಯೋಜಿಸಿ ಮತದಾನ ಜಾಗೃತಿ ಮೂಡಿಸುವುದರೊಂದಿಗೆ ಮತದಾನಕ್ಕೆ ಎಲ್ಲರನ್ನು ಸೆಳೆಯಬೇಕು. ಸಹಾಯವಾಣಿ ಬಳಕೆ ಮಾಡಿಕೊಂಡು ಗೊಂದಲ ಪರಿಹರಿಸಿಕೊಳ್ಳಲು ಅವಕಾಶವಿದೆ. ಆ್ಯಪ್ ಮೂಲಕ ಮತದಾರರ ಪಟ್ಟಿಯಲ್ಲಿನ ತಪ್ಪನ್ನು ಮನೆಯಲ್ಲಿ ಕುಳಿತು ಸರಿಪಡಿಸಿ ಕೊಳ್ಳಬಹುದಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ದೂರು ಗಳನ್ನು ವೆಬ್ ಸೈಟ್ ಮೂಲಕ ಸಲ್ಲಿಸಿದರೆ ತಕ್ಷಣ ಕ್ರಮಕೈಗೊಳ್ಳ ಲಾಗುವುದು ಎಂದು ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ೩ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಕೆ. ರಾಮರಾಜನ್ ಮಾತನಾಡಿ, ಮತದಾನದ ಪ್ರಾಮುಖ್ಯತೆ ಎಲ್ಲರಿಗೂ ಅರಿವಿದ್ದು, ಶೇ ೧೦೦ ರಷ್ಟು ಮತದಾನಕ್ಕೆ ಸರಕಾರಿ ನೌಕರರು ಶ್ರಮಿಸಬೇಕು. ಕಾನೂನು, ಸುವ್ಯವಸ್ಥೆಗೆ ತೊಡಕು ಉಂಟಾಗದAತೆ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಲು ಕರೆ ನೀಡಿದರು. ಉಪವಿಭಾಗಧಿಕಾರಿ ವಿನಾಯಕ್ ನರ್ವಡೆ ಮಾತನಾಡಿ, ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ವುಗೆ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಉಪನಿರ್ದೇಶಕ ಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರಕಾರದ ದ್ಯೇಯೋದ್ದೇಶ ಈಡೇರಿಕೆಗೆ ಸಿಬ್ಬಂದಿಗಳು ಸಹಕರಿಸಬೇಕು. ಮತದಾನದ ಮಹತ್ವ ತಿಳಿಸುವ ಮೂಲಕ ಮತದಾನ ಹೆಚ್ಚಳಕೆ ಶ್ರಮಿಸಬೇಕು ಎಂದು ತಿಳಿಸಿದರು.
ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ವಿಸ್ಮಯಿ, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ ತಾಲೂಕು ಸಹಾಯಕ ನಿರ್ದೇಶಕ ಸಿದ್ದೇಗೌಡ, ವೀರಾಜಪೇಟೆ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕಮಾದಯ್ಯ, ಮಡಿಕೇರಿ ತಾಲೂಕು ಸಹಾಯಕ ನಿರ್ದೇಶಕ ನವೀನ್, ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಸೇರಿದಂತೆ ಇನ್ನಿತರರು ಹಾಜರಿದ್ದರು. ಸಮಾಜ ಕಲ್ಯಾಣ ಇಲಾಖೆಯ ೩ ತಾಲೂಕಿನ ಸಿಬ್ಬಂದಿಗಳು ಹಗ್ಗಜಗ್ಗಾಟ, ಕ್ರಿಕೆಟ್, ವಾಲಿಬಾಲ್, ಥ್ರೋಬಾಲ್, ಸಂಗೀತ ಕುರ್ಚಿ,ಅಥ್ಲೆಟಿಕ್ಸ್, ಲಗೋರಿ ಸೇರಿದಂತೆ ಇನ್ನಿತರ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜ್, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಜಿ.ಪಂ. ಸಿಇಓ ವರ್ಣಿತ್ ನೇಗಿ, ಉಪವಿಭಾಗಾಧಿಕಾರಿ ವಿನಾಯಕ್ ನರ್ವಡೆ ಕೂಡ ಡಿಸಿ ಇಲೆವೆನ್ ತಂಡದಲ್ಲಿ ಕ್ರಿಕೆಟ್ ಆಟವಾಡಿ ಗಮನ ಸೆಳೆದರು.