ಕೂಡಿಗೆ, ಮಾ. ೧೬: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗುಂದದಲ್ಲಿರುವ ಹಾರಂಗಿ ಅಣೆಕಟ್ಟೆ ಮುಂಭಾಗದ ನಿರ್ಬಂಧಿತ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಜಲಾಶಯಕ್ಕೆ ಸೇರಿದ ನಿರ್ಬಂಧಿತ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಅನಧಿಕೃತವಾಗಿ ಮನೆ ನಿರ್ಮಾಣ ಕಾಮಗಾರಿ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಸ್ಥಗಿತಗೊಳಿಸಿ ಮನೆ ತೆರವುಗೊಳಿಸುವಂತೆ ಹಾರಂಗಿ ಅಣೆಕಟ್ಟೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬAಧ ಸ್ಥಳಕ್ಕೆ ನಿಗಮದ ಅಧೀಕ್ಷಕ ಅಭಿಯಂತರ ಕೆ.ಕೆ. ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.