ಕೂಡಿಗೆ, ಮಾ. ೧೭ : ಹಾಸನ ಹಾಲು ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಅವರು ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ.

ಒಕ್ಕೂಟದ ಆಡಳಿತ ಮಂಡಳಿಯ ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲೆಯಿಂದ ಒಂದೇ ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಕೆ.ಕೆ ಹೇಮಂತ್ ಕುಮಾರ್ ಅವಿರೋಧವಾಗಿ ಆಯ್ಕೆಯಾದ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಅಯ್ಕೆ ಪ್ರಮಾಣ ಪತ್ರವನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಹಾಲಿ ಶಾಸಕ, ಲೋಕೋಪಯೋಗಿ ಇಲಾಖೆಯ ಮಾಜಿ ಸಚಿವ ಹಾಗೂ ಒಕ್ಕೂಟದ ಅಧ್ಯಕ್ಷರಾದ ಹೆಚ್. ಡಿ. ರೇವಣ್ಣ ಸೇರಿದಂತೆ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿಯ ವಿವಿಧ ತಾಲೂಕಿನ ನಿರ್ದೇಶಕರು ಹಾಜರಿದ್ದರು.